ಬಸ್ ವ್ಯವಸ್ಥೆ ಕಲ್ಪಿಸುವಂತೆ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ‘ಎಕ್ಸ್’ ಖಾತೆ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿರುವ ಕೆಎಸ್‌ಆರ್‌ಟಿಸಿ ನಗರದ ಸುತ್ತಮುತ್ತಲಿನ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಇನ್ನಿತರ ಜಿಲ್ಲಾ ಕೇಂದ್ರಗಳಿಂದ, ವಿವಿಧ ತಾಲ್ಲೂಕು ಕೇಂದ್ರಗಳಿಂದ ಪರೀಕ್ಷಾ ಕೇಂದ್ರಗಳಿಗೆ ಹೆಚ್ಚುವರಿ ಬಸ್ ಓಡಿಸಲಿದೆ ಎಂದು ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ತಿಳಿಸಿದ್ದಾರೆ.