ಬೆಂಗಳೂರು: ಜರ್ಮನಿಯ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ಬೆಂಗಳೂರಿನಲ್ಲಿರುವ ಬಾಷ್ ಸೇರಿದಂತೆ ವಿವಿಧ ಕಂಪನಿಗಳ ಮುಖ್ಯಸ್ಥರ ಜತೆ ಚರ್ಚೆ ನಡೆಸಿದರು.

ನಿಯೋಗದ ಜತೆ ಮಂಗಳವಾರ ಬೆಳಿಗ್ಗೆ 10.30ಕ್ಕೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸ್ವಾಗತಿಸಿದರು.

ಆಟೋಮೋಟಿವ್, ಎಂಜಿನಿಯರಿಂಗ್, ಸಾಫ್ಟ್ವೇರ್ ಮತ್ತು ಎಲೆಕ್ಟ್ರಾನಿಕ್ಸ್ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಾಷ್, ಎಸ್ಎಪಿ, ಸೀಮೆನ್ಸ್, ಬಿಎಂಡಬ್ಲ್ಯೂ, ಮರ್ಸಿಡಿಸ್ ಬೆಂಜ್ನಂತಹ ದೊಡ್ಡ ಜರ್ಮನ್ ಕಂಪನಿಗಳು ಬೆಂಗಳೂರಿನಲ್ಲಿವೆ. ಕಾರ್ಲ್ ಜೈಸ್, ಡಿಎಂಜಿ ಮೋರಿ, ಕ್ರೋನೆಸ್ ನಂತಹ ಕಂಪನಿಗಳೂ ವಿವಿಧ ಕೈಗಾರಿಕಾ ಅಗತ್ಯಗಳನ್ನು ಪೂರೈಸುತ್ತಿವೆ.

ವಿವಿಧ ಕಂಪನಿಗಳ ಮುಖ್ಯಸ್ಥರ ಜತೆ ಚರ್ಚಿಸಿದ ನಂತರ ಮಧ್ಯಾಹ್ನ 3.25ಕ್ಕೆ ಅವರು ತೆರಳಿದರು. ಸಚಿವ ಎಂ.ಬಿ.ಪಾಟೀಲ, ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಗೌರವ್ಗುಪ್ತಾ ಮತ್ತವರ ತಂಡದ ಸದಸ್ಯರು ಬೀಳ್ಕೊಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.