ನವದೆಹಲಿಯಲ್ಲಿ ಸೋಮವಾರ ನಡೆದ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕಂದಾಯ ಸಚಿವ ಕೃಷ್ಣ ಬೈರೇಗೌಡ, ‘ಜಿಎಸ್‌ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೂ, ಜಿಎಸ್‌ಟಿ ಪರಿಹಾರದಲ್ಲಿ ರಾಜ್ಯಕ್ಕೆ ಭಾರಿ ಅನ್ಯಾಯವಾಗುತ್ತಿದೆ’ ಎಂದು ಅಂಕಿ ಅಂಶಗಳ ಸಹಿತ ವಿವರಿಸಿದರು. ಈ ವಿಷಯದ ಬಗ್ಗೆ ವಿಸ್ತೃತವಾಗಿ ಚರ್ಚಿಸಿ ಶಿಫಾರಸು ಮಾಡಲು ಮಂತ್ರಿಗಳ ತಂಡವನ್ನು ರಚಿಸಲು ಕೌನ್ಸಿಲ್ ನಿರ್ಧರಿಸಿತು.