ಕಲಬುರ್ಗಿ: ಬೆಳಗಾವಿ ಜತೆಗೆ ಕಲಬುರ್ಗಿಯನ್ನೂ ಎರಡನೇ ರಾಜಧಾನಿಯನ್ನಾಗಿ ಘೋಷಿಸಬೇಕು ಎಂದು ಹೈದರಾಬಾದ್ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ (ಎಚ್‌ಕೆಆರ್‌ಡಿಬಿ)ಯವರು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

‘ಹೈದರಾಬಾದ್ ಕರ್ನಾಟಕ ಅತ್ಯಂತ ಹಿಂದುಳಿದ ಪ್ರದೇಶವಾಗಿದೆ. ನಂಜುಂಡಪ್ಪ ವರದಿಯ ಶಿಫಾರಸುಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿಲ್ಲ. 371 (ಜೆ) ಕಾಯ್ದೆ ಜಾರಿಗೆ ಬಂದು ಐದು ವರ್ಷಗಳಾದರೂ, ಸಮರ್ಪಕವಾಗಿ ಅನುಷ್ಠಾನಗೊಂಡಿಲ್ಲ’ ಎಂದು ಸಂಸ್ಥೆಯ ಅಧ್ಯಕ್ಷ ಅಮರನಾಥ ಸಿ.ಪಾಟೀಲ, ಗೌರವ ಕಾರ್ಯದರ್ಶಿ ಶಶಿಕಾಂತ ಬಿ.ಪಾಟೀಲ ಆರೋಪಿಸಿದ್ದಾರೆ.

ಕಲಬುರ್ಗಿಯಲ್ಲಿ ವಿಶೇಷ ಆರ್ಥಿಕ ವಲಯ (ಎಸ್‌ಇಝಡ್)ಗಳು ಇಲ್ಲ. ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡಿಲ್ಲ. ವಿಭಾಗೀಯ ರೈಲ್ವೆ ಕಚೇರಿಯೂ ಆರಂಭಗೊಂಡಿಲ್ಲ. ಆದ್ದರಿಂದ ಕಲಬುರ್ಗಿಗೆ ಎರಡನೇ ರಾಜಧಾನಿ ಸ್ಥಾನಮಾನ ಕೊಡಬೇಕು. ಆ ಮೂಲಕ ತಾರತಮ್ಯ ಹೋಗಲಾಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.