ವಿಜಯಪುರ: ‘ಭಾರತ ಜೋಡೊ’ ಪಾದಯಾತ್ರೆಗೆ ಅಡ್ಡಿ ಪಡಿಸುವ ಬಿಜೆಪಿ ಹುನ್ನಾರದಲ್ಲಿಪೊಲೀಸ್ನವರೇನಾದರೂ ಶಾಮೀಲಾದ್ರೆ...’ ಎಂಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಾತಿಗೆವಿಜಯಪುರ ಗ್ರಾಮೀಣ ಠಾಣೆ ಕಾನ್ಸ್ಟೆಬಲ್ವೊಬ್ಬರು ವಿರೋಧ ವ್ಯಕ್ತಪಡಿಸಿ ಫೇಸ್ಬುಕ್ನಲ್ಲಿ ಕಾಮೆಂಟ್ ಹಾಕಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

‘ಪೊಲೀಸರಿಗೆ ಬೈಯುವ ನೀನು ಪೊಲೀಸ್ ಎಸ್ಕಾರ್ಟ್ ಇಲ್ಲದೇ ಮನೆಗೆ ಹೋಗು’ ಎಂದುವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವಕಾನ್ಸ್ಟೆಬಲ್ ರಾಜಶೇಖರ ಖಾನಾಪುರ ಸವಾಲು ಹಾಕಿದ್ದು, ಸಾಮಾಜಿಕ ಜಾಲತಾಣದಲ್ಲಿ ಪರ, ವಿರೋಧಕ್ಕೆ ಕಾರಣವಾಗಿದೆ.

‘ಸರ್ಕಾರಿ ಹುದ್ದೆಯಲ್ಲಿ ಪಕ್ಷಾತೀತವಾಗಿ ಕೆಲಸ ಮಾಡುವುದು ಬಿಟ್ಟು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಪರ ಹೇಳಿಕೆ ನೀಡಿರುವುದು ಖಂಡನೀಯ. ಅವರ ವಿರುದ್ಧ ಕ್ರಮಕೈಗೊಳ್ಳಬೇಕು’ ಎಂದುಸಿದ್ದರಾಮಯ್ಯ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಪರಿಶೀಲನೆ:

‘ಕಾನ್ಸ್ಟೆಬಲ್ ತಮ್ಮ ಫೇಸ್ಬುಕ್ನಲ್ಲಿ ಕಾಮೆಟ್ ಮಾಡಿರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಈ ಸಂಬಂಧ ಇದುವರೆಗೆ ಯಾರೂ ದೂರು ಕೊಟ್ಟಿಲ್ಲ. ಕೊಟ್ಟರೆ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.