ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಕರ್ಣ ಮಹಾಬಲೇಶ್ವರ ದೇವಾಲಯ ಹಸ್ತಾಂತರ ಆದೇಶ ರದ್ದು: ಹೈಕೋರ್ಟ್‌ ಮಹತ್ವದ ತೀರ್ಪು

Last Updated 10 ಆಗಸ್ಟ್ 2018, 18:20 IST
ಅಕ್ಷರ ಗಾತ್ರ

ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ 10 ವರ್ಷಗಳ ಹಿಂದೆ ಹಸ್ತಾಂತರಿಸಿದ್ದ ರಾಜ್ಯ ಸರ್ಕಾರದ ಕ್ರಮ ಕಾನೂನುಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

2008ರಲ್ಲಿ ರಾಜ್ಯ ಬಿಜೆಪಿ ಸರ್ಕಾರದಿಂದಗೋಕರ್ಣ ಮಹಾಬಲೇಶ್ವರ ದೇವಸ್ಥಾನವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿದ್ದ ಪ್ರಕ್ರಿಯೆ ನಡೆದಿತ್ತು.

ಹಸ್ತಾಂತರ ಆದೇಶ ಪ್ರಶ್ನಿಸಿ ಬಾಲಚಂದ್ರ ದೀಕ್ಷಿತ್‌ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು.ತಕರಾರು ಅರ್ಜಿಯನ್ನುಹೈಕೋರ್ಟ್‌ ವಿಭಾಗೀಯ ಪೀಠಮಾನ್ಯ ಮಾಡಿತು.

ದೇವಾಲಯವನ್ನು ಧಾರ್ಮಿಕ ದತ್ತಿ ಇಲಾಖೆಯಿಂದ ಕೈಬಿಟ್ಟ ಕ್ರಮ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿತು.

ದೇವಾಲಯದ ಪರಹಿರಿಯ ವಕೀಲ ಸುಬ್ರಹ್ಮಣ್ಯ ಜೋಯಿಸ್ ಅವರು ವಾದ ಮಂಡಿಸಿದರು.

ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಬಿ.ಎನ್.ಕೃಷ್ಣ ನೇತ್ರತ್ವದಲ್ಲಿ ದೇಗುಲದ ಉಸ್ತುವಾರಿ ಸಮಿತಿ ರಚಿಸುವಂತೆ ಹೈಕೋರ್ಟ್‌ ನಿರ್ದೇಶಿಸಿದೆ.

ಜಿಲ್ಲಾಧಿಕಾರಿ ಉಸ್ತುವಾರಿ ಸಮಿತಿ ಅಧ್ಯಕ್ಷರಾಗಿರುತ್ತಾರೆ.

ಇದೇ ವೇಳೆ ಉತ್ತರ ಕನ್ನಡ ಜಿಲ್ಲಾಧಿಕಾರಿಯು ದೇಗುಲದ ಲೆಕ್ಕ ಪತ್ರ ವಿವರವನ್ನು ಎರಡು ವಾರಗಳಲ್ಲಿ ನ್ಯಾಯಪೀಠಕ್ಕೆ ನೀಡುವಂತೆ ಆದೇಶ ಹೊರಡಿಸಲಾಗಿದೆ.

ಹೈಕೋರ್ಟ್‌ ತೀರ್ಪಿನ ಹಿನ್ನೆಲೆ ರಾಮಚಂದ್ರಾಪುರ ಮಠಕ್ಕೆ ಭಾರಿ ಮುಖಭಂಗವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT