ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ₹80 ಕೋಟಿಯ ಅಂದಾಜು ವೆಚ್ಚದಲ್ಲಿಚಿನ್ನದ ರಥ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ದೇವಾಲಯಕ್ಕೆ 240 ಕೆ.ಜಿ ಚಿನ್ನದಿಂದ ₹15 ಕೋಟಿ ಅಂದಾಜು ವೆಚ್ಚದಲ್ಲಿ ರಥ ನಿರ್ಮಿಸಿ, ಅರ್ಪಿಸುವ ಯೋಜನೆಗೆ ಸರ್ಕಾರ 2005ರ ಆಗಸ್ಟ್ ತಿಂಗಳಲ್ಲೇ ಅನುಮೋದನೆ ನೀಡಿತ್ತು. ಬಳಿಕ ಈ ಯೋಜನೆ ನನೆಗುದಿಗೆ ಬಿದ್ದಿತ್ತು.

ಇದನ್ನೂ ಓದಿ:ರಾಜಕಾರಣದಲ್ಲಿ ನಿಂಬೆ, ಹಾಗಲ!–ಚಿನ್ನದ ರಥಕ್ಕಿಂತ ಜನರ ಸಮಸ್ಯೆಗಳ ನಿವಾರಣೆಯೇ ರಾಜ್ಯ ಸರ್ಕಾರದ ಆದ್ಯತೆಯಾಗಬೇಕು

ದೇವಸ್ಥಾನದ ಭಕ್ತರು ಇತ್ತೀಚೆಗೆ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಹಿಂದಿನ ಸರ್ಕಾರಿ ಆದೇಶಗಳನ್ನು ಹಾಜರುಪಡಿಸಿ, ಯೋಜನೆಗೆ ಮತ್ತೆ ಚಾಲನೆ ನೀಡುವಂತೆ ಮನವಿ ಮಾಡಿದ್ದರು. ಹೀಗಾಗಿ, ಈಗಿನ ಮಾರುಕಟ್ಟೆ ದರದಲ್ಲಿ ಚಿನ್ನದ ದರ, ನಿರ್ಮಾಣ ವೆಚ್ಚ ಎಲ್ಲ ಅಂದಾಜುಗಳನ್ನೂ ಪರಿಷ್ಕರಿಸಿ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡಿಸುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದರು.

ಇನ್ನಷ್ಟು...

‘ಚಿನ್ನದ ರಥ ನಿರ್ಮಿಸಲು 2005ರಲ್ಲಿಯೇ ಅನುಮೋದನೆ’

’ಕುಕ್ಕೆ ದೇಗುಲಕ್ಕೆ ₹ 80 ಕೋಟಿ ಮೌಲ್ಯದ ಚಿನ್ನದ ರಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.