ಬೆಂಗಳೂರು: ಪ್ರಸಕ್ತ ವರ್ಷ ಫೆಬ್ರುವರಿಯಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ನಷ್ಟು ಬಿಸಿಲು ಅಧಿಕವಾಗಿದ್ದು, ತಿಂಗಳ ಕೊನೆಯ ವಾರದಲ್ಲಿ ತಾಪಮಾನ ಇಳಿಮುಖ ಆಗಬಹುದು. ಪೂರ್ವ ಮುಂಗಾರಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿಯ ಸಭೆಗೆ ಅಧಿಕಾರಿಗಳು ಈ ಮಾಹಿತಿ ನೀಡಿದರು.

2025ನೇ ಸಾಲಿನ ಹಿಂಗಾರು-ಮುಂಗಾರು ಮಳೆ ಸ್ಥಿತಿ, ಕೃಷಿ, ಕುಡಿಯುವ ನೀರು, ಹವಾಮಾನ ಹಾಗೂ ಅಣೆಕಟ್ಟೆಗಳಲ್ಲಿನ ನೀರಿನ ಮಟ್ಟದ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ‘ಮಾರ್ಚ್ ಕೊನೆಯ ವಾರ ಮತ್ತು ಏಪ್ರಿಲ್-ಮೇ ತಿಂಗಳುಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆದರೆ, ಹಿಂಗಾರಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ. ಅಕ್ಟೋಬರ್, ನವೆಂಬರ್, ಡಿಸೆಂಬರ್ ತಿಂಗಳಲ್ಲಿ ಮಳೆಯ ಪ್ರಮಾಣ ಇಳಿಮುಖ ಆಗಬಹುದು’ ಎಂದೂ ಅಧಿಕಾರಿಗಳು ಮಾಹಿತಿ ನೀಡಿದರು.

ರಾಜ್ಯದ ಯಾವ ಭಾಗದಲ್ಲೂ ಕುಡಿಯುವ ನೀರಿಗೆ ತೊಂದರೆ ಆಗದಂತೆ ಎಚ್ಚರಿಕೆ ವಹಿಸಬೇಕು. ಸಮಸ್ಯೆ ಉಂಟಾಗಬಹುದಾದ ಗ್ರಾಮಗಳ ಪಟ್ಟಿ ಮಾಡಬೇಕು ಎಂದು ಅಧಿಕಾರಿಗಳಿಗೆ ಕೃಷ್ಣ ಬೈರೇಗೌಡ ಸೂಚಿಸಿದರು.

ಮುಂಬರುವ ದಿನಗಳಲ್ಲಿ ಜಲಾಶಯಗಳಲ್ಲಿ ನೀರು ಯಾವ ಮಟ್ಟ ತಲುಪಲಿದೆ, ಅದರಿಂದಾಗಿ ಕುಡಿಯುವ ನೀರಿಗಾಗಿ ಲಭ್ಯವಾಗಲಿರುವ ನೀರಿನ ಪ್ರಮಾಣವೆಷ್ಟು? ಈ ಕುರಿತು ಮುಂದಿನ ಸಭೆಗಳಲ್ಲಿ ಸ್ಪಷ್ಟ ಮಾಹಿತಿ ನೀಡುವಂತೆ ಜಲಸಂಪನ್ಮೂಲ ಇಲಾಖೆಗೆ ಸೂಚಿಸಿದರು. ಕುಡಿಯಲು ಅವಶ್ಯವಿರುವ ನೀರು ಕಾಯ್ದಿರಿಸಿದ ಬಳಿಕ ನೀರಾವರಿಗೆ ನೀರು ಬಿಡುಗಡೆಗೊಳಿಸುವ ಬಗ್ಗೆಯೂ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಈ ಹಿಂದಿನ ವರ್ಷಗಳಲ್ಲಿ ಕೈಗೊಂಡ ಕ್ರಮಗಳ ಜೊತೆಗೆ, ಕೈಗೊಳ್ಳಬಹುದಾದ ಹೆಚ್ಚುವರಿ ಕ್ರಮಗಳ ಕುರಿತು ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಕೃಷ್ಣ ಬೈರೇಗೌಡ ಸೂಚಿಸಿದರು.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಭೆಯಲ್ಲಿದ್ದರು.

ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರ್ಗಳ ಪಿ.ಡಿ. ಖಾತೆಯಲ್ಲಿ ವಿಪತ್ತು ನಿಧಿ ಲಭ್ಯವಿದ್ದು ಪರಿಹಾರ ಕ್ರಮ ಕೈಗೊಳ್ಳಲು ಹಣಕಾಸು ಸಮಸ್ಯೆ ಇಲ್ಲ
ಕೃಷ್ಣ ಬೈರೇಗೌಡ ಕಂದಾಯ ಸಚಿವ

ಕುಡಿಯುವ ನೀರು ಪೂರೈಕೆ

ಚಿಕ್ಕಬಳ್ಳಾಪುರ ಚಿತ್ರದುರ್ಗ ತುಮಕೂರು ಬೆಂಗಳೂರು ನಗರ ಮತ್ತು ರಾಮನಗರ ಈ ಐದು ಜಿಲ್ಲೆಗಳ 13 ತಾಲ್ಲೂಕುಗಳ ವ್ಯಾಪ್ತಿಯ 66 ಗ್ರಾಮಗಳಿಗೆ ಹಾಗೂ ನಗರ ವ್ಯಾಪ್ತಿಗೆ ಸಂಬಂಧಿಸಿದಂತೆ ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ನಗರ ಹಾಗೂ ಕೋಲಾರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ 56 ವಾರ್ಡ್ಗಳಿಗೆ ಬಾಡಿಗೆ ಟ್ಯಾಂಕರ್ ಮತ್ತು ಕೊಳವೆ ಬಾವಿಗಳ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.

ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ,ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ, ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಸಭೆಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.