ಬೆಂಗಳೂರು: ರಾಜ್ಯದ ರಾಜಕಾರಣದಲ್ಲಿ ಘಟಿಸಿರುವ ಮಹತ್ತರ ಬದಲಾವಣೆಯಿಂದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ತಂದುಕೊಡಲಿದೆ ಎಂಬ ನಿರೀಕ್ಷೆ ಗರಿಗೆದರಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಗೋಪಾಲಕೃಷ್ಣ ಬೇಳೂರು, ನಾವು ಸುಮಾರು 30 ಮಂದಿ ಭೇಟಿ ನೀಡಿ ಸಚಿವ ಸ್ಥಾನ ಪಡೆಯುವ ಬಗ್ಗೆ ಹೈಕಮಾಂಡ್ ಜೊತೆ ಚರ್ಚಿಸಿದ್ದೇವೆ. ಅದನ್ನು ನಿರ್ಧರಿಸುವುದು ಹೈಕಮಾಂಡ್ಗೆ ಬಿಟ್ಟಿದ್ದು ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿರುವ ಹಿನ್ನಲೆಯಲ್ಲಿ ಬೇಳೂರಿಗೆ ಸಚಿವ ಸ್ಥಾನ ದೊರಕಬಹುದೆ ಎಂಬ ಚರ್ಚೆ ಇಲ್ಲಿನ ರಾಜಕೀಯ ವಲಯದಲ್ಲಿ ತೀವ್ರಗೊಂಡಿದೆ.

2023ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ದಿನದಿಂದಲೂ ಬೇಳೂರು ಡಿ.ಕೆ.ಶಿವಕುಮಾರ್ ಗುಂಪಿನ ಜೊತೆಗೆ ಗುರುತಿಸಿಕೊಂಡಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಇಲ್ಲಿನ ಕಾಂಗ್ರೆಸ್ ಟಿಕೆಟ್ಗೆ ಬೇಳೂರು ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಪುತ್ರಿ ಡಾ.ರಾಜನಂದಿನಿ ಕಾಗೋಡು ನಡುವೆ ತೀವ್ರ ಪೈಪೋಟಿ ನಡೆದಿತ್ತು.

ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಶಕ್ತಿಯನ್ನು ಬಲಪಡಿಸುವ, ಈಡಿಗ ಸಮುದಾಯಕ್ಕೆ ಮತ್ತಷ್ಟು ಪ್ರಾಶಸ್ತ್ಯ ನೀಡುವ ದೃಷ್ಟಿಯಿಂದ ಈ ಬಾರಿ ಬೇಳೂರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ ಎಂಬ ಚರ್ಚೆ ಕಾಂಗ್ರೆಸ್ ವಲಯದಲ್ಲಿ ನಡೆಯುತ್ತಿದೆ.
.ಮೇಲ್ಪಂಕ್ತಿ ಹಾಕಿದ ಸಿದ್ದರಾಮಯ್ಯ: ಮಾಜಿ ಸಚಿವ ಸುಧಾಕರ್ ಅಭಿಮತ.ಹೈಕಮಾಂಡ್ ಭೇಟಿಯಾದ ಸಿದ್ದರಾಮಯ್ಯ, ಡಿಕೆಶಿ: ಸಚಿವಗಿರಿಗೆ ಲಾಬಿ ಜೋರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.