ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Republic Day: ಪ್ರಗತಿ ಪಥದತ್ತ ರಾಜ್ಯ– ರಾಜ್ಯಪಾಲ‌ ಗೆಹಲೋತ್‌

Published 26 ಜನವರಿ 2024, 5:47 IST
Last Updated 26 ಜನವರಿ 2024, 5:47 IST
ಅಕ್ಷರ ಗಾತ್ರ

ಬೆಂಗಳೂರು: ಸಂವಿಧಾನವು ಭಾರತದ ನಾಗರಿಕರಿಗೆ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆಗೆ ಅವಕಾಶವನ್ನು ಒದಗಿಸುವುದರೊಂದಿಗೆ, ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವ ಜತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯ ಹೊಂದಿದೆ ಎಂದು ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಹೇಳಿದರು

75 ನೇ ಗಣರಾಜ್ಯೋತ್ಸವದ ಅಂಗವಾಗಿ ಕರ್ನಾಟಕದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಅವರು, ಬೆಂಗಳೂರಿನ ಮಾಣಿಕ್‌ ಶಾ ಪರೇಡ್‌ ಮೈದಾನದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹಲೋತ್‌ ಅವರು ದ್ವಜಾರೋಹಣ ನೆರವೇರಿಸಿದರು.

ಸಂವಿಧಾನ ಅನುಷ್ಠಾನಗೊಂಡ 75ನೇ ವರ್ಷದಲ್ಲಿ ಕರ್ನಾಟಕ ಹಾಗೂ ಭಾರತ ಅಭೂತಪೂರ್ವ ಪ್ರಗತಿ ಸಾಧಿಸಿದೆ. ಡಾ. ಬಿ.ಆರ್‌ ಅಂಬೇಡ್ಕರ್‌ ಮತ್ತು ಅವರ ತಂಡದ ದೂರದೃಷ್ಟಿ ಪ್ರಗತಿಯ ದಾರಿಯಲ್ಲಿ ನಡೆಯುವುದಕ್ಕೆ ದಾರಿದೀಪವಾಗಿದೆ ಎಂದರು.

ಇಡೀ ಜಗತ್ತಿಗೆ ವಿವಿಧತೆಯಲ್ಲಿ ಏಕತೆ ಎಂಬ ಸಂದೇಶವನ್ನು ನೀಡುವ ಎಲ್ಲರ ನಡುವೆ ನಾವು ಶಾಂತಿ, ಸಾಮರಸ್ಯವನ್ನು ಸ್ಥಾಪಿಸಬೇಕು. ಕರ್ನಾಟಕದ ಎಲ್ಲಾ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಒಳಗೊಳ್ಳುವಿಕೆಗಾಗಿ ಒಟ್ಟಾಗಿ ಕೆಲಸ ಮಾಡಬೇಕು ಎಂದರು.

ಸರ್ಕಾರದ ಗ್ಯಾರಂಟಿ ಬದ್ಧತೆ

ನಮ್ಮ ಸರ್ಕಾರವು ನೀಡಿದ್ದ ಭರವಸೆಯಂತೆ ಐದು ಗ್ಯಾರಂಟಿಗಳು ಈಡೇರಿಸಿದೆ. ಮಹಾತ್ವಕಾಂಕ್ಷಿ ಶಕ್ತಿ ಯೋಜನೆಯ ಮೂಲಕ ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಯಿಟ್ಟಿದೆ. ಇಲ್ಲಿಯವರೆಗೆ 134.34 ಕೋಟಿ ಮಹಿಳಾ ಪ್ರಯಾಣಕರು ಶಕ್ತಿಯೋಜನೆಯಡಿ ಪ್ರಯಾಣ ಮಾಡಿದ್ದಾರೆ ಎಂದು ತಿಳಿಸಿದರು.

ಹೀಗೆ ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ ಯೋಜನೆಯನ್ನು ಜಾರಿಗೊಳಿಸಿ ಸರ್ಕಾರ ಬದ್ಧತೆಯನ್ನು ಮೆರೆದಿದೆ ಎಂದರು.

195 ಬರಪೀಡಿತ ತಾಲ್ಲೂಕುಗಳಲ್ಲಿ ಬರ ಪರಿಹಾರ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲು ರಾಜ್ಯ ಸರ್ಕಾರವು ಎನ್‌ಡಿಆರ್‌ಎಫ್‌ನಿಂದ (NDRF) ಅನುದಾನ ಕೋರಿದೆ. ಮಧ್ಯಂತರ ಪರಹಾರವಾಗಿ ಬರಗಾಲ ಘೋಷಿತ ತಾಲ್ಲೂಕುಗಳ ಪ್ರತಿ ರೈತರಿಗೆ ಮಾಸಿಕ ₹2 ಸಾವಿರ ನೀಡಲಾಗುತ್ತಿದೆ. ಸುಮಾರು 30 ಲಕ್ಷ ರೈತರಿಗೆ ₹580 ಕೋಟಿ ಬಿಡುಗಡೆ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ಇದರ ಜತೆಗೆ ಬೆಳೆ ಸಮೀಕ್ಷೆ ಯೋಜನೆಯಡಿ 2023–24ನೇ ಸಾಲಿನಲ್ಲಿ ಒಟ್ಟು 268 ತಾಲ್ಲೂಕುಗಳ ಪೈಕಿ 259.57 ಲಕ್ಷ ತಾಲ್ಲೂಕುಗಳಲ್ಲಿ ಸಮೀಕ್ಷೆ ನಡೆಸಿ ಶೇ 96.85ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದರು.

ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿಗೆ ಮತ್ತು ಜಾಗತಿಕ ಕೇಂದ್ರವನ್ನಾಗಿ ಮಾಡಲು ಬ್ರ್ಯಾಂಡ್‌ ಬೆಂಗಳೂರು ಅನ್ನು ರೂಪಿಸಲಾಗಿದೆ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT