ಮಂಗಳವಾರ, 4 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯಪಾಲ ಗೆಹಲೋತ್ ಪ್ರಮಾಣ ವಚನ ನಾಳೆ

Last Updated 9 ಜುಲೈ 2021, 22:22 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರದ ಮಾಜಿ ಸಚಿವ ಥಾವರಚಂದ್ ಗೆಹಲೋತ್ ಅವರು ರಾಜ್ಯದ ನೂತನ ರಾಜ್ಯಪಾಲರಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜಭವನದ ಗಾಜಿನ ಮನೆಯಲ್ಲಿ ಭಾನುವಾರ ಬೆಳಿಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ್‌ ಶ್ರೀನಿವಾಸ್ ಓಕಾ ಅವರು ನೂತನ ರಾಜ್ಯಪಾಲರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣವಚನ ಬೋಧಿಸಲಿದ್ದಾರೆ.

ಹಾಲಿ ರಾಜ್ಯಪಾಲ ವಜುಭಾಯಿ ವಾಲಾ ಅವರ ಅವಧಿ ಪೂರ್ಣಗೊಂಡಿದೆ. ಅವರ ಸ್ಥಾನಕ್ಕೆ ಥಾವರಚಂದ್ ಅವರನ್ನು ನೇಮಕ ಮಾಡಲಾಗಿದೆ.

ರಾಜ್ಯಪಾಲರಾಗಿ ನೇಮಕಗೊಂಡ ಬಳಿಕ ಅವರು, ಕೇಂದ್ರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ಸ್ಥಾನ ಹಾಗೂ ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ
ಸಲ್ಲಿಸಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT