ಬೆಂಗಳೂರು: ಸರ್ಕಾರಿ ನೌಕರರು ರಾಜ್ಯದ ಹಾಗೂ ಹೊರರಾಜ್ಯದ ಖಾಸಗಿ ಆಸ್ಪತ್ರೆಗಳಲ್ಲಿ ಪಡೆದ ವೈದ್ಯಕೀಯ ವೆಚ್ಚವನ್ನು ಮರು ಪಾವತಿಸುವ ಮಿತಿಯನ್ನು ₹2 ಲಕ್ಷದಿಂದ ₹3 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಈ ವೆಚ್ಚಕ್ಕೆ ಒಪ್ಪಿಗೆ ನೀಡುವ ಅಧಿಕಾರವನ್ನು ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಗೆ ನೀಡಲಾಗಿದೆ.
₹3 ಲಕ್ಷ ಮೀರಿದ, ₹5 ಲಕ್ಷದ ವರೆಗಿನ ಮರು ಪಾವತಿ ಬಿಲ್ಗಳನ್ನು ಸಂಬಂಧಿಸಿದ ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸುವಂತೆ ತಿಳಿಸಲಾಗಿದೆ.