ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಒಂದು ತಿಂಗಳ ವೇತನವನ್ನು ಹಿಡಿಯಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ ಎಂಬ ಗೊಂದಲಕಾರಿ ಸುದ್ದಿ ಸಾಮಾಜಿಕ ಜಾಲತಾಣದಲ್ಲಿಹರಿದಾಡುತ್ತಿದ್ದು, ನೌಕರರನ್ನು ಗೊಂದಲಕ್ಕೀಡುಮಾಡಿದೆ.
ಈ ರೀತಿಯ ಯಾವುದೇ ನಿರ್ಧಾರ ಮಾಡುವಾಗ ಸರ್ಕಾರವು ಈ ಹಿಂದೆ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಕರೆದು ಚರ್ಚೆ ನಡೆಸಿದೆ.
ಆದರೆ, ಈ ಕುರಿತಂತೆ ಈ ಕ್ಷಣದವರೆಗೂ ಸರ್ಕಾರ ಈ ರೀತಿಯ ಯಾವುದೇ ಚರ್ಚೆಯನ್ನು ಸಂಘದ ಜೊತೆ ಮಾಡಿಲ್ಲ ಎಂದು ಕರ್ನಾಟಕ ರಾಜ್ಯ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಗ ಸರ್ಕಾರಿ ನೌಕರರ ಒಂದು ತಿಂಗಳ ಸಂಬಳ ಕಟಾವು ಮಾಡುತ್ತಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.