ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವರಿಯಲ್ಲಿ ರಾಜ್ಯಮಟ್ಟದ ಉದ್ಯೋಗ ಮೇಳ: ಸರ್ಕಾರದಿಂದ ಸಿದ್ಧತೆ ಆರಂಭ

Published 30 ಡಿಸೆಂಬರ್ 2023, 12:46 IST
Last Updated 30 ಡಿಸೆಂಬರ್ 2023, 12:46 IST
ಅಕ್ಷರ ಗಾತ್ರ

ಬೆಂಗಳೂರು: ಯುವ ಸಮುದಾಯಕ್ಕೆ ಉದ್ಯೋಗ ಕಲ್ಪಿಸುವ ಆಶಯದಿಂದ ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಬೆಂಗಳೂರಿನಲ್ಲಿ ನಡೆಸಲು ಸರ್ಕಾರ ಸಿದ್ಧತೆ ಆರಂಭಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಈ ಕುರಿತು ಮಹತ್ವದ ಸಭೆ ನಡೆಯಿತು. ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜನವರಿಯಲ್ಲಿ ರಾಜ್ಯಮಟ್ಟದ ಮೇಳ ನಡೆಯಲಿದೆ. ಅದಾದ ಬಳಿಕ, ಬಳಿಕ ಪ್ರತಿ ಜಿಲ್ಲಾ ಮತ್ತು ವಲಯವಾರು ಉದ್ಯೋಗ ಮೇಳಗಳನ್ನು ನಡೆಸಲಾಗುವುದು ಎಂದರು.

ಕನ್ನಡಿಗರಿಗೆ ಉದ್ಯೋಗ ಅವಕಾಶ ಕಲ್ಪಿಸುವ ಉದ್ದೇಶದಿಂದ ಸರ್ಕಾರಿ, ಖಾಸಗಿ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮತ್ತು ಉದ್ಯೋಗ ಸೃಷ್ಟಿಯ ಬಗ್ಗೆ ವಿಸ್ತೃತ ಚರ್ಚೆ ನಡೆಸಲಾಯಿತು. ರಾಜ್ಯ ಮತ್ತು ಹೊರ ರಾಜ್ಯಗಳಲ್ಲಿ ಕನ್ನಡಿಗರಿಗೆ ಎಲ್ಲಾ ಕ್ಷೇತ್ರಗಳಲ್ಲೂ ಉದ್ಯೋಗ ದೊರಕುವಂತಾಗಬೇಕು. ಐಟಿ–ಬಿಟಿ, ಹೊಟೇಲ್‌, ಉತ್ಪಾದನಾ, ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಗ್ರಾಮೀಣ ಭಾಗದ ಯುವಕ–ಯುವತಿಯರಿಗೆ ಹೆಚ್ಚಿನ ಅವಕಾಶ ಸಿಗುವಂತಾಗಬೇಕು. ಆದ ಕಾರಣ ಕೌಶಲ ಅಭಿವೃದ್ಧಿಗೆ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂಬ ಸಲಹೆಯೂ ಸಭೆಯಲ್ಲಿ ವ್ಯಕ್ತವಾಯಿತು. ಇದಕ್ಕೆ ಸಂಬಂಧಿಸಿದ ರೂಪುರೇಷೆಗಳನ್ನು ಶೀಘ್ರದಲ್ಲೇ ರೂಪಿಸಲಾಗುವುದು ಎಂದರು.

ಕೈಗಾರಿಕೆಗಳಿಗೆ ಅನುಗುಣವಾಗಿ ಉದ್ಯೋಗದಾತರನ್ನು ಸೃಷ್ಟಿಸಬೇಕು ಎನ್ನುವ ಅಭಿಪ್ರಾಯ ಸಭೆಯಲ್ಲಿ ವ್ಯಕ್ತವಾಯಿತು. ಹೀಗಾಗಿ ಸಚಿವರ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಉದ್ದಿಮೆದಾರರ ಬಳಿ ಚರ್ಚೆ ನಡೆಸುತ್ತವೆ ಎಂದು ಶಿವಕುಮಾರ್ ತಿಳಿಸಿದರು.

ಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ಯುವ ಸಬಲೀಕರಣ ಸಚಿವ ಬಿ.ನಾಗೇಂದ್ರ, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT