ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೆ.21ರಿಂದ ಸರ್ಕಾರಿ ಆಸ್ಪತ್ರೆ ಒಪಿಡಿ ಬಂದ್

Last Updated 14 ಸೆಪ್ಟೆಂಬರ್ 2020, 19:35 IST
ಅಕ್ಷರ ಗಾತ್ರ

ಬೆಂಗಳೂರು: ವೇತನ ಪರಿಷ್ಕರಣೆಗೆ ಸರ್ಕಾರ ಕ್ರಮ ಕೈಗೊಂಡಿಲ್ಲ ಎಂಬ ಕಾರಣಕ್ಕೆ ಸರ್ಕಾರದ ಜತೆ ಮಂಗಳ
ವಾರದಿಂದ (ಸೆ.15) ಅಸಹಕಾರ ಚಳವಳಿ ಆರಂಭಿಸಲಿರುವ ವೈದ್ಯರು, ಇದೇ 21ರಿಂದ ಹೊರರೋಗಿಗಳ ವಿಭಾಗದ (ಒ‍ಪಿಡಿ) ಕರ್ತವ್ಯಕ್ಕೆ ಗೈರು ಹಾಜರಾಗಲಿದ್ದಾರೆ.

‘ರಾಜ್ಯದಾದ್ಯಂತ ಸೆ.21ರಂದು ‘ಬೆಂಗಳೂರು ಚಲೋ’ ಜಾಥಾ ನಡೆಸಲಾಗುವುದು. ಅಂದಿನಿಂದ ತುರ್ತು ಸೇವೆಗಳನ್ನು ಮಾತ್ರ ನೀಡಲಾಗುವುದು’ ಎಂದುಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಜಿ.ಎ. ಶ್ರೀನಿವಾಸ್ ‘ಪ್ರಜಾವಾಣಿ’ಗೆ ತಿಳಿಸಿದರು.

ಸಭೆಗೆ ಬಹಿಷ್ಕಾರ: ಆರೋಗ್ಯಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 4,968 ವೈದ್ಯರು ಮಂಗಳವಾರದಿಂದಲೇ (ಸೆ.15) ಆನ್‌ಲೈನ್‌ ಸಹಿತ ಎಲ್ಲ ಸರ್ಕಾರಿ ಸಭೆಗಳಿಂದ ದೂರ ಉಳಿಯಲಿದ್ದಾರೆ.

‘ವೈದ್ಯಕೀಯ ಚಿಕಿತ್ಸಾ ವರದಿಯೂ ಸೇರಿ ಯಾವುದೇ ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸುವುದಿಲ್ಲ. ಆದರೆ, ಕರ್ತವ್ಯಕ್ಕೆ ಹಾಜರಾಗಿ, ಎಲ್ಲ ರೀತಿಯ ವೈದ್ಯಕೀಯ ಸೇವೆಯನ್ನು (ಸೆ.20ರವರೆಗೆ) ಮುಂದುವರಿಸುತ್ತೇವೆ’ ಎಂದು ಶ್ರೀನಿವಾಸ್‌ ಸ್ಪಷ್ಟಪಡಿಸಿದರು.

‘ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ (ಸಿಜಿಎಚ್‌ಎಸ್‌) ಮಾದರಿಯಲ್ಲಿ ವೇತನ ಪರಿಷ್ಕರಿಸಬೇಕು
ಹಾಗೂ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಕೋರಿದ್ದೆವು. ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT