ಬೆಂಗಳೂರು: ‘ರಾಜ್ಯ ಸರ್ಕಾರಕ್ಕೆ ಆರು ಬಾರಿ ಪತ್ರ ಬರೆದರೂ, ಎರಡು ವರ್ಷಗಳಿಂದ ಅಧಿಕೃತ ಸರ್ಕಾರಿ ವಸತಿಗೃಹ ಕೊಟ್ಟಿಲ್ಲ’ ಎಂದು ವಿಧಾನಸಭೆ ವಿರೋಧ ಪಕ್ಷ ನಾಯಕ ಆರ್. ಅಶೋಕ ಆರೋಪಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕಳೆದ ಅವಧಿಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಅಂದು ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿದ್ದ ಸಿದ್ದರಾಮಯ್ಯ ಅವರಿಗೆ ನೀಡಿದ್ದ ವಸತಿಗೃಹವನ್ನೇ ನೀಡಲು ಕೇಳಿಕೊಂಡಿದ್ದೆ. ಆದರೆ, ಅವರೇ ಮುಖ್ಯಮಂತ್ರಿಯಾಗಿದ್ದರೂ ಸ್ಪಂದನೆ ಇಲ್ಲ, ಪತ್ರಕ್ಕೆ ಪ್ರತಿಕ್ರಿಯೆಯನ್ನೂ ನೀಡಿಲ್ಲ. ಇದು ಕಾಂಗ್ರೆಸ್ ಪಕ್ಷ ಶಿಷ್ಟಾಚಾರ ಪಾಲನೆ ಮಾಡುವ ಪರಿ’ ಎಂದು ಟೀಕಿಸಿದರು.

‘ಸಿಗಂದೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ. ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಮಂತ್ರಿಗೆ ಪತ್ರ ಬರೆದಿರುವುದು ಸರಿ ಅಲ್ಲ. ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಸಾಗರದಲ್ಲಿದ್ದರೂ, ಕಾರ್ಯಕ್ರಮಕ್ಕೆ ಹೋಗಿಲ್ಲ. ಸೇತುವೆ ನಿರ್ಮಾಣದ ಕ್ರೆಡಿಟ್ ಬಿಜೆಪಿಗೆ ಹೋಗುತ್ತಿದೆ ಎನ್ನುವ ಹತಾಶೆಯಿಂದ ಗೊಂದಲ ಸೃಷ್ಟಿ ಮಾಡಲು ಹೊರಟಿದ್ದಾರೆ. ರಾಜ್ಯ ಸರ್ಕಾರ ಯಾವ ಕಾರ್ಯಕ್ರಮಗಳಿಗೆ ವಿರೋಧ ಪಕ್ಷಗಳ ಸಲಹೆ ಕೇಳಿದೆ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.