ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಡಿನ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

Published 19 ಜುಲೈ 2023, 10:39 IST
Last Updated 19 ಜುಲೈ 2023, 10:39 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ರೀತಿಯ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಅಂತಹ ಶಕ್ತಿಗಳನ್ನು ರಾಜ್ಯದಿಂದ ಬೇರು ಸಮೇತ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರಿಗೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT