ರಾಜ್ಯದಲ್ಲಿ ಸುಮಾರು 2.84 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದರೂ, ಏಳೆಂಟು ವರ್ಷಗಳಿಂದ ನೇರ ನೇಮಕಾತಿ ಪ್ರಕ್ರಿಯೆ ನಡೆದೇ ಇಲ್ಲ. ಧಾರವಾಡದಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸಿದ ನಂತರ, ಸರ್ಕಾರ 3 ವರ್ಷ ವಯೋಮಿತಿ ಸಡಿಲಿಸಿದೆ. ಹೀಗೆ, ವಯೋಮಿತಿ ಸಡಿಲಿಸಿದ್ದರೂ, ನೇರ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರದ್ದು ಮಾತ್ರ ಆಮೆ ನಡಿಗೆ. ರಾಜ್ಯದಲ್ಲಿ ಖಾಲಿ ಹುದ್ದೆಗಳ ಸಂಪೂರ್ಣ ವಿವರ, ಅಂಕಿ–ಅಂಶ ಮತ್ತು ಸರ್ಕಾರದ ಪ್ರತಿಕ್ರಿಯೆ ಈ ವಿಡಿಯೊದಲ್ಲಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.