ವಿಜಯಪುರದ ಆಲಮೇಲದ ಕೆಪಿಆರ್ ಸಕ್ಕರೆ ಕಾರ್ಖಾನೆ, ಹಾವಿನಾಳದ ಇಂಡಿಯನ್ ಸಕ್ಕರೆ ಕಾರ್ಖಾನೆ, ನಾದ ಕೆ.ಡಿ.ಯ ಜಮಖಂಡಿ ಸಕ್ಕರೆ ಕಾರ್ಖಾನೆ ಮತ್ತು ಕಾರಜೋಳದ ಬಸವೇಶ್ವರ ಸಕ್ಕರೆ ಕಾರ್ಖಾನೆಯಲ್ಲಿ ಮಂಗಳವಾರ ಆಹಾರ ಇಲಾಖೆ, ಪೊಲೀಸ್, ಕೆಎಸ್‌ಎಫ್‌ಸಿ ಸಿಬ್ಬಂದಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದು, ಯಾವೊಂದು ಕಾರ್ಖಾನೆಯಲ್ಲೂ ತೂಕ, ಅಳತೆಯಲ್ಲಿ ಮೋಸವಾಗುತ್ತಿರುವುದು ತಪಾಸಣೆ ವೇಳೆ ಕಂಡುಬಂದಿಲ್ಲ ಎಂದು ವಿಜಯಪುರ ಜಿಲ್ಲಾ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಉಪನಿರ್ದೇಶಕ ಸಿದ್ದರಾಮ ಮಾರಿಹಾಳ ‘ಪ್ರಜಾವಾಣಿ’ಗೆ ಖಚಿತ ಪಡಿಸಿದ್ದಾರೆ.