ಬೆಂಗಳೂರು: ಬೆಳಗಾವಿ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಚಳಿ ಬಿಡಿಸಲು ಕಾರ್ಯತಂತ್ರ ರೂಪಿಸಲಾಗಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಸದನದ ಒಳಗಡೆ ಒಟ್ಟಾಗಿ ಸರ್ಕಾರದ ಕಿವಿ ಹಿಂಡಲು ಸಿದ್ಧತೆ ಮಾಡಿಕೊಂಡಿವೆ. ಸದನದ ಹೊರಗಡೆಯೂ ಪ್ರತಿಭಟನೆ ನಡೆಸಲಿವೆ ಎಂದರು.

‘ವಿಧಾನಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ನೋಂದಣಿ ಪ್ರಾರಂಭವಾಗಿದೆ. ಪಕ್ಷದ ಹಿರಿಯರ ಸಭೆ ನಡೆಸಿದ್ದೇವೆ. ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕರಾದ ಎಸ್. ಸುರೇಶ್ ಕುಮಾರ್, ಉದಯ ಗರುಡಾಚಾರ್, ಮುನಿರತ್ನ, ಮುನಿರಾಜು, ಸಿ.ಕೆ. ರಾಮಮೂರ್ತಿ ಎಲ್ಲರ ನೇತೃತ್ವದಲ್ಲಿ ವಿಶೇಷ ಸಭೆ ನಡೆಸಲಾಗಿದೆ. ಮತದಾರರ ನೋಂದಣಿಗೆ ಶಾಸಕರ ಅಭಿಪ್ರಾಯ ಪಡೆದಿದ್ದೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.