ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆ.ಎಸ್. ಈಶ್ವರಪ್ಪ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ,ಮುಖ್ಯಮಂತ್ರಿಗಳ ವಿರುದ್ಧ ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ ಮಾಡಿರುವ ಆರೋಪ ಗಂಭೀರ ಸ್ವರೂಪದ್ದಾಗಿದ್ದು ರಾಜ್ಯದ ಆಡಳಿತ ಕುಸಿದು ಬಿದ್ದಿರುವುಕ್ಕೆ ಸಾಕ್ಷಿಯಾಗಿದೆ.ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿಯವರನ್ನು ವಜಾಗೊಳಿಸಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಸ್ವಜನಪಕ್ಷಪಾತ ಮತ್ತು ಅಕ್ರಮಗಳ ಬಗ್ಗೆ ವಿರೋಧ ಪಕ್ಷದ ನಾಯಕನಾಗಿ ನಾನು ಮಾಡುತ್ತಾ ಬಂದಿರುವ ಆರೋಪಗಳಿಗೆ ಈಶ್ವರಪ್ಪ ಸಾಕ್ಷ್ಯಗಳನ್ನು ಒದಗಿಸಿದ್ದಾರೆ. ಅವರು ಯಾವುದೇ ಒತ್ತಡಕ್ಕೆ ಮಣಿಯದೆ ಮಾತಿಗೆ ಬದ್ದರಾಗಿ ಉಳಿಯಬೇಕು ಎಂದು ಹೇಳಿದ್ದಾರೆ.ಮುಂದುವರಿದು,ಈಶ್ವರಪ್ಪನವರು ತಮ್ಮ ರಾಜಕೀಯ ಜೀವನದಲ್ಲಿ ಮೊದಲ ಬಾರಿ ಒಂದು ಒಳ್ಳೆಯ ಕೆಲಸ ಮಾಡಿದ್ದಾರೆ. ರಾಜಕೀಯ ಹಿತಾಸಕ್ತಿಗಿಂತ ರಾಜ್ಯದ ಹಿತಾಸಕ್ತಿ ಮುಖ್ಯ ಎಂದು ಸಾರಿದ್ದಾರೆ ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಕುಟುಕಿದ್ದಾರೆ.

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಕ್ರಮಗಳು ಕೇವಲ ಗ್ರಾಮೀಣ ಅಭಿವೃದ್ದಿ ಇಲಾಖೆಯೊಂದಕ್ಕೆ ಸಂಬಂಧಿಸಿದ್ದಲ್ಲ, ಇದು ಸರ್ಕಾರದ ಪ್ರತಿಯೊಂದು ಇಲಾಖೆಯೊಳಗಿನ ಕರ್ಮಕಾಂಡ. ಬಿಜೆಪಿ ವರಿಷ್ಠರು ಈಶ್ವರಪ್ಪನವರ ಬಾಯಿಮುಚ್ಚಿಸಲು ಪ್ರಯತ್ನಿಸದೆ ಇತರ ಸಚಿವರೂ ಮುಕ್ತವಾಗಿ ಅಭಿಪ್ರಾಯ ಹಂಚಿಕೊಳ್ಳಲು ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ:ಈಶ್ವರಪ್ಪ ಬಹಿರಂಗ ದೂರು ನೀಡಬಾರದಿತ್ತು: ಅರುಣ್ ಸಿಂಗ್

ಮುಖ್ಯಮಂತ್ರಿಗಳ ವಿರುದ್ಧ ಈಶ್ವರಪ್ಪನವರು ರಾಜ್ಯಪಾಲರಿಗೆ ಮಾತ್ರ ಆರೋಪ ಪಟ್ಟಿ ಸಲ್ಲಿಸದೆ, ಅದರ ಪ್ರತಿಯನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೂ ಕಳುಹಿಸಿದ್ದಾರೆ. ಅವರೆಲ್ಲರೂ ಆರೋಪ ಪಟ್ಟಿ ಬಗ್ಗೆ ತಕ್ಷಣ ಪ್ರತಿಕ್ರಿಯಿಸಿ ಆಂತರಿಕ ಪ್ರಜಾಪ್ರಭುತ್ವವನ್ನು ಎತ್ತಿ ಹಿಡಿಯಬೇಕು ಎಂದು ಒತ್ತಿಹೇಳಿದರು.

ಮಾತ್ರವಲ್ಲದೆ,ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವುದಕ್ಕೆ ಕೊರೊನಾ ವೈರಸ್ ಕಾರಣವಲ್ಲ. ಈ ಸರ್ಕಾರಕ್ಕೆ ಅಂಟಿರುವ ಭ್ರಷ್ಟಾಚಾರದ ವೈರಸ್ ಕಾರಣ ಎನ್ನುವುದನ್ನು ಈಶ್ವರಪ್ಪನವರು ತನ್ನ ಸಂಶೋಧನೆ ಮೂಲಕ ಬಹಿರಂಗ ಗೊಳಿಸಿದ್ದಾರೆ.ನಮ್ಮ ಸರ್ಕಾರವನ್ನು 10 % ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಮಂತ್ರಿಯವರೇ, ನಿಮ್ಮದೇ ಸಚಿವರು ನಿಮಗೆ ಕಳಿಸಿರುವ ನಿಮ್ಮ ಸರ್ಕಾರದ ಜಾತಕಪತ್ರವನ್ನು ಪರಿಶೀಲಿಸಿ ನೀವೇ ರಾಜ್ಯಸರ್ಕಾರಕ್ಕೆ ಭ್ರಷ್ಟಾಚಾರದ ರೇಟಿಂಗ್ ಕೊಟ್ಟುಬಿಡಿ ಎಂದು ತಿವಿದಿದ್ದಾರೆ.

ಪ್ರಧಾನಿ ಮೋದಿ ವಿರುದ್ಧವೂ ಗುಡುಗಿರುವ ಸಿದ್ದರಾಮಯ್ಯ,ಪ್ರಧಾನಮಂತ್ರಿ ನರೇಂದ್ರ ಮೋದಿಯವರೇ, ʼನಾ ಖಾವುಂಗಾ, ನಾ ಖಾನೆ ದೂಂಗಾʼ (ನಾನೂ ತಿನ್ನುವುದಿಲ್ಲ, ತಿನ್ನೋಕೂ ಬಿಡೋದಿಲ್ಲ) ಎಂಬ ನಿಮ್ಮ ಜಗದ್ವಿಖ್ಯಾತ ಘೋಷಣೆಯನ್ನು ʼಮೈ ಬಿ ಖಾವೂಂಗಾ, ತುಮ್ ಬಿ ಖಾವೋʼ (ನಾನೂ ತಿಂತೀನಿ, ನೀವೂ ತಿನ್ನಿ) ಎಂದು ಬದಲಿಸಿ ಬಿಡಿ ಎಂದು ವ್ಯಂಗ್ಯವಾಡಿದ್ದಾರೆ.

ಆಪರೇಷನ್ ಕಮಲ ಪ್ರಕರಣದ ತನಿಖೆಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ನೀಡಿರುವುದು,ರಾಜ್ಯದ ಬಿಜೆಪಿ ಸರ್ಕಾರ ಆಪರೇಷನ್ ಕಮಲ ಎಂಬ ಅನೈತಿಕ ಚಟುವಟಿಕೆಯ ಅಕ್ರಮ ಶಿಶು ಎನ್ನುವ ನಮ್ಮ ಆರೋಪವನ್ನು ಪುಷ್ಠೀಕರಿಸಿದೆ ಎಂದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕೆ ಕಾರಣವಾದ ಆಪರೇಷನ್ ಕಮಲ ಕಾರ್ಯಾಚರಣೆಯಲ್ಲಿ ವಿನಿಮಯಗೊಂಡ ಕೋಟ್ಯಂತರ ರೂಪಾಯಿಗಳ ಆಮಿಷದ ಬಗ್ಗೆ ಸಮಗ್ರ ಸ್ವರೂಪದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.