ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ನಲ್ಲಿ ಘೋಷಿಸಿರುವ ₹5,300 ಕೋಟಿ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದರು.

ಸಂಸತ್ ಭವನದಲ್ಲಿ ಗುರುವಾರ ಪ್ರಧಾನಿ ಅವರನ್ನು ಭೇಟಿ ಮಾಡಿದ ಅವರು, ಚಿತ್ರದುರ್ಗ ಕ್ಷೇತ್ರ ಹಾಗೂ ರಾಜ್ಯದ ಪ್ರಗತಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಗಮನಕ್ಕೆ ತಂದರು.

‘ಪ್ರಾದೇಶಿಕ ಅಭಿವೃದ್ಧಿಗೆ ಅತ್ಯಂತ ಮಹತ್ವದ್ದಾದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗೆ ಅನುದಾನವನ್ನು ಶೀಘ್ರ ಬಿಡುಗಡೆ ಮಾಡುವ ಕುರಿತು ಚರ್ಚೆ ನಡೆಸಿದೆ. ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ನಿರಂತರ ಬೆಂಬಲ ನೀಡುವಂತೆ ಮನವಿ ಮಾಡಿದೆ‘ ಎಂದು ಕಾರಜೋಳ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.