ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಸ್ಥಾನದಿಂದ ಎ.ಆರ್. ಗೋವಿಂದಸ್ವಾಮಿ ಅವರನ್ನು ವಜಾಗೊಳಿಸಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶ ಹೊರಡಿಸಿದೆ.

2024ರ ಮಾರ್ಚ್ನಲ್ಲಿ ಅವರು ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಕಾರ್ಯಕಾರಿ ಸಮಿತಿಯಲ್ಲಿ ಪ್ರಾರಂಭಿಕ ದಿನಗಳಿಂದಲೂ ಸಮನ್ವಯದ ಕೊರತೆ ಉಂಟಾಗಿತ್ತು. ಅಧ್ಯಕ್ಷರ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಅಕಾಡೆಮಿ ಸದಸ್ಯರೊಬ್ಬರು ವಿಧಾನಸಭೆಯ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಅವರಿಗೆ ಪತ್ರ ಬರೆದಿದ್ದರು. ಅಲ್ಲದೆ, ಗೋವಿಂದಸ್ವಾಮಿ ಅವರು ಇಂಧನ ಇಲಾಖೆಯಲ್ಲಿ ನೌಕರರಾಗಿರುವ ಕಾರಣ, ಅವರ ನೇಮಕಾತಿ ಬಗ್ಗೆ ಪತ್ರದಲ್ಲಿ ಪ್ರಶ್ನಿಸಿದ್ದರು.

ಈ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ರುದ್ರಪ್ಪ ಲಮಾಣಿ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರಿಗೆ ಇತ್ತೀಚೆಗೆ ಪತ್ರ ಬರೆದು ಒತ್ತಾಯಿಸಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಇಲಾಖೆ, ನೇಮಕಾತಿ ರದ್ದುಪಡಿಸಿ ಆದೇಶ ಹೊರಡಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.