ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹20 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ವಿದ್ಯುತ್‌ ಚಾಲಿತ ವಾಹನಗಳಿಗೆ ತೆರಿಗೆ ರದ್ದು

Published 13 ಡಿಸೆಂಬರ್ 2023, 15:28 IST
Last Updated 13 ಡಿಸೆಂಬರ್ 2023, 15:28 IST
ಅಕ್ಷರ ಗಾತ್ರ

ವಿಧಾನಸಭೆ: ₹ 20 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ವಿದ್ಯುತ್‌ ಚಾಲಿತ ವಾಹನಗಳಿಗೆ ತೆರಿಗೆ ರದ್ಧತಿಯ ತಿದ್ದುಪಡಿಯೊಂದಿಗೆ ‘ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ಎರಡನೇ ತಿದ್ದುಪಡಿ) ಮಸೂದೆ–2023’ಕ್ಕೆ ವಿಧಾನಸಭೆ ಬುಧವಾರ ಅಂಗೀಕಾರ ನೀಡಿತು.

1.5 ಟನ್‌ನಿಂದ 12 ಟನ್‌ವರೆಗಿನ ತೂಕದ ಹಾಗೂ 10 ಲಕ್ಷದಿಂದ ₹ 15 ಲಕ್ಷದವರೆಗಿನ ಮೋಟಾರ್‌ ಕ್ಯಾಬ್‌ ಮತ್ತು ಸರಕು ಸಾಗಣೆ ವಾಹನಗಳಿಗೆ ಜೀವಿತಾವಧಿ ತೆರಿಗೆ ಬದಲಿಗೆ ತ್ರೈಮಾಸಿಕ ತೆರಿಗೆ ಪಾವತಿ ಪದ್ಧತಿಯನ್ನು ಪುನಃ ಅನುಷ್ಠಾನಕ್ಕೆ ತರುವ ಉದ್ದೇಶದಿಂದ ಈ ಮಸೂದೆ ತರಲಾಗಿದೆ. ₹ 20 ಲಕ್ಷಕ್ಕಿಂತ ಹೆಚ್ಚಿನ ಮೌಲ್ಯದ ವಿದ್ಯುತ್‌ ಚಾಲಿತ ವಾಹನಗಳಿಗೆ ವಾಹನದ ಮೌಲ್ಯದ ಶೇಕಡ 10ರಷ್ಟು ತೆರಿಗೆ ವಿಧಿಸುವ ಪ್ರಸ್ತಾವ ಮಸೂದೆಯಲ್ಲಿತ್ತು. ಅದನ್ನು ಕೈಬಿಡುವಂತೆ ವಿರೋಧ ಪಕ್ಷಗಳ ಸದಸ್ಯರು ಆಗ್ರಹಿಸಿದರು. 

ಬೇಡಿಕೆಯನ್ನು ಒಪ್ಪಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ₹20 ಲಕ್ಷಕ್ಕಿಂತ ಹೆಚ್ಚು ಮೌಲ್ಯದ ವಿದ್ಯುತ್‌ ಚಾಲಿತ ಸರಕು ಸಾಗಣೆ ವಾಹನ ಮತ್ತು ಕ್ಯಾಬ್‌ಗಳಿಗೆ ವಾಹನಗಳಿಗೆ ತೆರಿಗೆ ವಿನಾಯ್ತಿ ನೀಡುವುದಾಗಿ ಪ್ರಕಟಿಸಿದರು. ಈ ತಿದ್ದುಪಡಿಯೊಂದಿಗೆ ಮಸೂದೆಗೆ ಸದನವು ಅಂಗೀಕಾರ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT