ಸೋಮವಾರ, 13 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತರ‌ ಹಕ್ಕುಗಳ ರಕ್ಷಣೆಗೆ ಸರ್ಕಾರ ಬದ್ಧ: ಸಿದ್ದರಾಮಯ್ಯ

Published 26 ಜುಲೈ 2023, 9:13 IST
Last Updated 26 ಜುಲೈ 2023, 9:13 IST
ಅಕ್ಷರ ಗಾತ್ರ

ಬೆಂಗಳೂರು: ಅಲ್ಪಸಂಖ್ಯಾತರ ಹಕ್ಕುಗಳ ರಕ್ಷಣೆಗೆ ತಮ್ಮ ಸರ್ಕಾರ ಬದ್ಧವಾಗಿದೆ. ಅವರ ಹಕ್ಕುಗಳ ದಮನಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಪ್ರತಿನಿಧಿಗಳು ಮುಖ್ಯಮಂತ್ರಿಯವರನ್ನು ಬುಧವಾರ ಭೇಟಿಮಾಡಿ,‌ಮಾತುಕತೆ ನಡೆಸಿದರು. ಅವರಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸರ್ಕಾರವು ಅಲ್ಪಸಂಖ್ಯಾತರು, ಆದಿವಾಸಿಗಳು ಮತ್ತು ಬುಡಕಟ್ಟುಗಳ ಜನರ ಹಿತಾಸಕ್ತಿ ರಕ್ಷಣೆಗೆ ಆದ್ಯತೆ ನೀಡಲಿದೆ ಎಂದರು.

ಏಕರೂಪ ನಾಗರಿಕ ಸಂಹಿತೆ ಅನುಷ್ಠಾನಕ್ಕೆ ಕೇಂದ್ರ ಸರ್ಕಾರ ಮುಂದಾಗಿರುವ ಕುರಿತು ಮಂಡಳಿಯ ಪ್ರತಿನಿಧಿಗಳು ಆತಂಕ‌ ವ್ಯಕ್ತಪಡಿಸಿದರು. ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಿದ ಬಳಿಕ ಆ ಬಗ್ಗೆ ರಾಜ್ಯ ಸರ್ಕಾರ ಪ್ರತಿಕ್ರಿಯೆ ನೀಡಲಿದೆ ಎಂದು ಮುಖ್ಯಮಂತ್ರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT