ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸರ್ಕಾರಿ ನೌಕರರ ಸಂಘದ ಚುನಾವಣೆ: ಇಂದಿನಿಂದ ಆರಂಭ

Published : 16 ಸೆಪ್ಟೆಂಬರ್ 2024, 23:55 IST
Last Updated : 16 ಸೆಪ್ಟೆಂಬರ್ 2024, 23:55 IST
ಫಾಲೋ ಮಾಡಿ
Comments

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಶಾಖೆಯಿಂದ ಆರಂಭಗೊಂಡು ರಾಜ್ಯ ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ಚುನಾವಣಾ ಪ್ರಕ್ರಿಯೆಯನ್ನು ಸೆ. 17ರಿಂದ ಡಿ. 27ರವರೆಗೆ ವಿವಿಧ ಹಂತದಲ್ಲಿ ನಡೆಸಲು ಚುನಾವಣಾಧಿಕಾರಿ ಎ. ಹನುಮನರಸಯ್ಯ ಅಧಿಸೂಚನೆ ಹೊರಡಿಸಿದ್ದಾರೆ.

ಮೊದಲ ಹಂತದಲ್ಲಿ ಬೆಂಗಳೂರು ನಗರ ಜಿಲ್ಲೆಯ ರಾಜ್ಯ ಪರಿಷತ್‌ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಸೆ. 17ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, 26ಕ್ಕೆ ನಾಮಪತ್ರ ಸಲ್ಲಿಕೆ ಮುಕ್ತಾಯವಾಗಲಿದೆ. ಅ. 8ರಿಂದ ಡಿ. 4ರವರೆಗೆ ಆಯಾ ಇಲಾಖಾ ಕ್ಷೇತ್ರವಾರು ಮತದಾನ ನಡೆಯಲಿದೆ. 

ತಾಲ್ಲೂಕು ಶಾಖೆಗಳ ಕಾರ್ಯಕಾರಿ ಸಮಿತಿಗಳ ಚುನಾವಣೆ ಅ. 9ರಿಂದ ಅ. 28ರವರೆಗೆ, ತಾಲ್ಲೂಕು ಶಾಖೆಗಳ ಅಧ್ಯಕ್ಷರ ಆಯ್ಕೆ ಅ. 30ರಿಂದ ನ. 16ರವರೆಗೆ, ಜಿಲ್ಲಾ ಶಾಖೆಗಳ ಕಾರ್ಯಕಾರಿ ಸಮಿತಿಗಳಿಗೆ ಅ. 28ರಿಂದ ನ. 16ರವರೆಗೆ, ಜಿಲ್ಲಾ ಶಾಖೆಗಳ ಅಧ್ಯಕ್ಷರ ಚುನಾವಣೆ ನ. 19ರಿಂದ ಡಿ. 4ರವರೆಗೆ ರಾಜ್ಯ ಘಟಕದ ಅಧ್ಯಕ್ಷರು ಹಾಗೂ ರಾಜ್ಯ ಖಜಾಂಚಿ ಸ್ಥಾನಗಳಿಗೆ ಡಿ.12ರಿಂದ 27ರವರೆಗೆ ಚುನಾವಣೆಗಳು ನಡೆಯಲಿವೆ. ಡಿ. 27ಕ್ಕೆ ಚುನಾವಣೆಯ ಎಲ್ಲ ಪ್ರಕ್ರಿಯೆಗಳೂ ಪೂರ್ಣಗೊಳ್ಳಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT