ಬೆಂಗಳೂರು: ಸದ್ಯದ ಪರಿಸ್ಥಿತಿಗೆ ಪೂರಕವಾಗಿ ಕನಿಷ್ಠ ವೇತನ ಕಾಯ್ದೆಗೆ ತಿದ್ದುಪಡಿ ತರುವ ಚಿಂತನೆ ನಡೆದಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.
ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳ ಜತೆ ಶುಕ್ರವಾರ ಸಭೆ ನಡೆಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕನಿಷ್ಠ ವೇತನ ಕಾಯ್ದೆ ತಿದ್ದುಪಡಿಯೂ ಸೇರಿದಂತೆ ಹಲವು ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳ ಪ್ರಮುಖರು ಮಂಡಿಸಿದ್ದಾರೆ. ಎಲ್ಲ ಬೇಡಿಕೆಗಳನ್ನೂ ಪರಿಶೀಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.
ಈಗ ದುಡಿಮೆಯ ಸ್ವರೂಪ ಬದಲಾಗಿದೆ. ಮನೆಯಿಂದ ಕೆಲಸ ಮಾಡುವವರ ಸಂಖ್ಯೆಯೂ ಹೆಚ್ಚುತ್ತಿದೆ. ಅವರದ್ದೇ ಸಂಘಟನೆಯೂ ಇದೆ. ಎಲ್ಲ ಕಾರ್ಮಿಕರಿಗೆ ಅನುಕೂಲವಾಗುವಂತೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.
ಕಾರ್ಮಿಕ ಸಂಘಟನೆಗಳು ಹಲವು ಬೇಡಿಕೆಗಳನ್ನು ಇರಿಸಿವೆ. ಎಲ್ಲವನ್ನೂ ಏಕಕಾಲಕ್ಕೆ ಈಡೇರಿಸುವುದು ಕಷ್ಟ. ಇಲಾಖೆಯ ಆರ್ಥಿಕ ಸ್ಥಿತಿಯನ್ನು ಆಧರಿಸಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.