ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಿಸಾನ್‌ ಮಾನಧನ್: ರಾಜ್ಯದ 41,683 ರೈತರು ನೋಂದಣಿ

Published 6 ಫೆಬ್ರುವರಿ 2024, 16:02 IST
Last Updated 6 ಫೆಬ್ರುವರಿ 2024, 16:02 IST
ಅಕ್ಷರ ಗಾತ್ರ

ನವದೆಹಲಿ : ದೇಶದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಪಿಂಚಣಿ ನೀಡಲು ಕೇಂದ್ರ ಸರ್ಕಾರವು ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ್ ಮಾನಧನ್ ಯೋಜನೆಯಡಿ (ಪಿಎಂಕೆಎಂವೈ) ಇಲ್ಲಿಯವರೆಗೆ 23.30 ಲಕ್ಷ ರೈತರು ಹೆಸರು ನೋಂದಾಯಿಸಿದ್ದಾರೆ.

‘2019ರ ಸೆಪ್ಟೆಂಬರ್‌ನಲ್ಲಿ ಈ ಯೋಜನೆಯು ಅನುಷ್ಠಾನಗೊಂಡಿದೆ. 18ರಿಂದ 40 ವರ್ಷದ ಒಳಗಿನ ರೈತರು ಸೌಲಭ್ಯಕ್ಕೆ ಅರ್ಹರಿರುತ್ತಾರೆ. 60 ವರ್ಷದ ಬಳಿಕ ಅವರಿಗೆ ಮಾಸಿಕ ₹3 ಸಾವಿರ ಪಿಂಚಣಿ ಸಿಗಲಿದೆ’ ಎಂದು ಕೇಂದ್ರ ಕೃಷಿ ಸಚಿವ ಅರ್ಜುನ್‌ ಮುಂಡಾ ಅವರು, ಲೋಕಸಭೆಗೆ ನೀಡಿರುವ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

‘ಯೋಜನೆಯಡಿ ಇಲ್ಲಿಯವರೆಗೆ ಕರ್ನಾಟಕದಲ್ಲಿ 41,683 ರೈತರು ಹೆಸರು ನೋಂದಾಯಿಸಿದ್ದಾರೆ. ಪ್ರಸಕ್ತ ವರ್ಷದ ಜನವರಿ 31ರ ವರೆಗೆ ಈ ರೈತರು ₹10.78 ಕೋಟಿ ವಂತಿಗೆ ಪಾವತಿಸಿದ್ದಾರೆ’ ಎಂದು ತಿಳಿಸಿದ್ದಾರೆ.

ವಯಸ್ಸಿನ ಆಧಾರದ ಮೇಲೆ ಫಲಾನುಭವಿಗಳು ಮಾಸಿಕವಾಗಿ ₹55ರಿಂದ ₹ 200 ವಂತಿಗೆ ಕಟ್ಟಬೇಕಿದೆ. ರೈತರು ಪಾವತಿಸಿದ ಮೊತ್ತಕ್ಕೆ ಅನುಗುಣವಾಗಿ ಕೇಂದ್ರ ಸರ್ಕಾರವು ಸಮಾನ ಮೊತ್ತವನ್ನು ಪಿಂಚಣಿ ನಿಧಿಗೆ ಪಾವತಿ ಮಾಡುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT