ಬುಧವಾರ, 12 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇವಸ್ಥಾನ ಅನುದಾನ ದುರ್ಬಳಕೆ ಕುರಿತು ತನಿಖೆ- ಸಚಿವ ರಾಮಲಿಂಗಾ ರೆಡ್ಡಿ

Published 4 ಡಿಸೆಂಬರ್ 2023, 16:14 IST
Last Updated 4 ಡಿಸೆಂಬರ್ 2023, 16:14 IST
ಅಕ್ಷರ ಗಾತ್ರ

ವಿಧಾನಸಭೆ: ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಮುಜರಾಯಿ ಇಲಾಖೆ ಬಿಡುಗಡೆ ಮಾಡಿದ ಅನುದಾನ ದುರ್ಬಳಕೆ ಆರೋಪ ಕುರಿತು ತನಿಖೆ ನಡೆಸಲಾಗುವುದು’ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಭರವಸೆ ನೀಡಿದರು.

ಜೆಡಿಎಸ್‌ನ ಕರೆಮ್ಮ ಜಿ. ನಾಯಕ ಪ್ರಶ್ನೆಗೆ ಸೋಮವಾರ ಉತ್ತರಿಸಿದ ಅವರು, ‘ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗೆ ಬಿಡುಗಡೆ ಮಾಡಿರುವ ಅನುದಾನದ ಬಳಕೆ ಕುರಿತು ಪರಿಶೀಲನೆ ನಡೆಸಲಾಗುವುದು. ಅನುದಾನ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ ನಿರ್ದಿಷ್ಟ ಪ್ರಕರಣಗಳಿದ್ದರೆ ದೂರು ಸಲ್ಲಿಸಬಹುದು. ಆ ಕುರಿತು ತನಿಖೆ ನಡೆಸುತ್ತೇವೆ’ ಎಂದರು.

‘ದೇವದುರ್ಗ ತಾಲ್ಲೂಕಿನ ಹಲವು ದೇವಸ್ಥಾನಗಳ ಅಭಿವೃದ್ಧಿ, ದುರಸ್ತಿಗೆ ಕಳೆದ ವರ್ಷಗಳಲ್ಲಿ ಬಿಡುಗಡೆಯಾಗಿದ್ದ ಅನುದಾನ ದುರ್ಬಳಕೆ ಆಗಿದೆ. ಹಲವೆಡೆ ಕಾಮಗಾರಿಗಳನ್ನು ನಡೆಸದೇ ಬಿಲ್‌ ಪಾವತಿಸಲಾಗಿದೆ. ಅಧಿಕಾರಿಗಳು ಮತ್ತು ಗುತ್ತಿಗೆದಾರರು ಶಾಮೀಲಾಗಿ ಅಕ್ರಮ ಎಸಗಿದ್ದಾರೆ’ ಎಂದು ದಾಖಲೆಗಳನ್ನು ಪ್ರದರ್ಶಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT