ಬೆಂಗಳೂರು: ರಾಜ್ಯದ 33 ಡಿವೈಎಸ್ಪಿ/ಎಸಿಪಿ, 132 ಇನ್‌ಸ್ಪೆಕ್ಟರ್‌ಗಳು ಹಾಗೂ ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯ 218 ಪೊಲೀಸ್ ಸಬ್ ಇನ್‌ಸ್ಪೆಕ್ಟರ್‌ಗಳನ್ನು (ಪಿಎಸ್ಐ) ವರ್ಗಾವಣೆ ಮಾಡಿ ಪೊಲೀಸ್ ಸಿಬ್ಬಂದಿ ಮಂಡಳಿ ಮಂಗಳವಾರ ಆದೇಶ ಹೊರಡಿಸಿದೆ.
‘ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಆದೇಶ ಹೊರಡಿಸಲಾಗಿದೆ. ನಿಗದಿತ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಬೇಕು’ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ವರ್ಗಾವಣೆಗೊಂಡಿರುವ ಕೆಲ ಪಿಎಸ್‌ಐಗಳನ್ನು ಕರ್ತವ್ಯಕ್ಕೆ ಹಾಜರಾಗದಂತೆ ತಡೆದಿರುವುದಾಗಿ ಗೊತ್ತಾಗಿದ್ದು, ಪರಿಷ್ಕೃತ ಪಟ್ಟಿ ಬಿಡುಗಡೆ ಆಗುವ ಸಾಧ್ಯತೆ ಇದೆ.