ಜಾರ್ಖಂಡ್ ರಾಜ್ಯದ ಧನಾಬಾದ್ ಜಿಲ್ಲೆಯ ಕತ್ರಾಸ್‌ನಲ್ಲಿ ಆರೋಪಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರು, ಗುರುವಾರ ಸಂಜೆ ಆತನನ್ನು ಬಂಧಿಸಿದ್ದಾರೆ. ಬಳಿಕ, ಆತನ ನೆಲೆಸಿದ್ದ ಮನೆಯಲ್ಲಿ ಕೂಡಾ ಪರಿಶೀಲನೆ ನಡೆಸಲಾಯಿತು. ಶುಕ್ರವಾರ ನ್ಯಾಯಾಲಯದ ಎದುರು ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ವಶಕ್ಕೆ ಪಡೆಯಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.