Live Update | ಗ್ರಾಮ ಪಂಚಾಯಿತಿ ಚುನಾವಣೆ ಮತದಾನದ ವೇಳೆ ಘರ್ಷಣೆ; ಕಲ್ಲು ತೂರಾಟ
LIVE
ರಾಜ್ಯದ ಒಟ್ಟು 5,761 ಗ್ರಾಮ ಪಂಚಾಯಿತಿಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆಯುತ್ತಿದ್ದು, ಎರಡನೇ ಹಂತದ ಮತದಾನ ಇದೇ 27ರಂದು ನಡೆಯಲಿದೆ. ಡಿ.30ರಂದು ಮತ ಎಣಿಕೆ ನಡೆಯಲಿದೆ. ಮೊದಲ ಹಂತದಲ್ಲಿ 117 ತಾಲ್ಲೂಕುಗಳ 3,019 ಗ್ರಾಮ ಪಂಚಾಯಿತಿಗಳ ಚುನಾವಣೆಗಾಗಿ ಒಟ್ಟು 23,625 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1,41,750 ಚುನಾವಣಾ ಸಿಬ್ಬಂದಿ ನೇಮಿಸಲಾಗಿದೆ. ಕೋವಿಡ್ ಇರುವುದರಿಂದ ಸುರಕ್ಷಿತ ಮತದಾನಕ್ಕಾಗಿ 45 ಸಾವಿರಕ್ಕೂ ಹೆಚ್ಚು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಯನ್ನೂ ಬಳಸಿಕೊಳ್ಳಲಾಗುತ್ತಿದೆ.