ಬೆಂಗಳೂರು: ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ ಸ್ಥಾನಗಳನ್ನು ನಿಗದಿಪಡಿಸಿ ಹೊರಡಿಸಲಾದ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಸಾರ್ವಜನಿಕರ ಕೋರಿಕೆಯ ಮೇರೆಗೆ ಮೇ 8ರ ಸಂಜೆ 5.30ರವರೆಗೆ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಹೇಳಿದೆ.

ಸಾರ್ವಜನಿಕರು ಆನ್ಲೈನ್ ಮೂಲಕ ತಮ್ಮ ಮನವಿಗಳನ್ನು https://rdpr.karnataka.gov.in/rdc/public/ಗೆ ಸಲ್ಲಿಸಬಹುದು. ಅಂಚೆ ಮೂಲಕ ಅರ್ಜಿ ಸಲ್ಲಿಸುವವರು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/A, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀದಿ, ಬೆಂಗಳೂರು-560001 ಇಲ್ಲಿಗೆ ಕಳುಹಿಸಬಹುದು.

ರಾಜ್ಯದ 31 ಜಿಲ್ಲೆಗಳ ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರ ಸಂಖ್ಯೆಯ ಕುರಿತು ಸ್ವೀಕರಿಸಿದ ಆಕ್ಷೇಪಣೆ, ಅಹವಾಲುಗಳ ಬಗ್ಗೆ ಮೇ 12ರಿಂದ 15ರವರೆಗೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಬಹುಮಹಡಿ ಕಟ್ಟಡದಲ್ಲಿ ಅದಾಲತ್ ನಡೆಸಲಾಗುವುದು. ಅದಾಲತ್ನಲ್ಲಿ ಭಾಗವಹಿಸಲು ಇಚ್ಛಿಸುವವರು ತಮ್ಮ ಆಧಾರ್ ಅಥವಾ ಭಾವಚಿತ್ರವುಳ್ಳ ಗುರುತಿನ ಚೀಟಿಯನ್ನು ತಮ್ಮೊಂದಿಗೆ ಕಡ್ಡಾಯವಾಗಿ ತರಬೇಕು ಎಂದು ಆಯೋಗ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.