ಬೆಂಗಳೂರು:ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶೀಘ್ರವೇ ಗ್ರಾಮ ವಾಸ್ತವ್ಯ ಮಾಡುವುದಾಗಿ ಹೇಳಿದ್ದಾರೆ.

’ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರ್ಕಾರದ ಕಾರ್ಯವೈಖರಿ ತಿಳಿಯಲು ನೆರವಾಗುವುದು ಗ್ರಾಮ ವಾಸ್ತವ್ಯ’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಸರ್ಕಾರಿ ಶಾಲೆಗಳಲ್ಲಿ ಪ್ರಾರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಗ್ರಾಮ ವಾಸ್ತವ್ಯ ಆರಂಭಿಸಿದ್ದ ಕುಮಾರಸ್ವಾಮಿ ಅವರು, ಮೈತ್ರಿ ಸರ್ಕಾರದ ಮುಖ್ಯಮಂತ್ರಿ ಆದ ಬಳಿಕ ಗ್ರಾಮ ವಾಸ್ತವ್ಯ ನಡೆಸಿರಲಿಲ್ಲ. ಮೈತ್ರಿ ಸರ್ಕಾರ ಒಂದು ವರ್ಷ ಪೂರ್ಣಗೊಳಿಸಿದ ಬಳಿಕ ಗ್ರಾಮ ವಾಸ್ತವ್ಯ ನಡೆಸುವುದಾಗಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.