ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ 1ರಿಂದ 8ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಎರಡನೇ ಜೊತೆ ಸಮವಸ್ತ್ರ ಖರೀದಿಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ.
ಸಮವಸ್ತ್ರಕ್ಕಾಗಿ ಪ್ರತಿ ವಿದ್ಯಾರ್ಥಿಗೆ ₹ 250 ನಿಗದಿಪಡಿಸಲಾಗಿದ್ದು, ಇದನ್ನು ಹೊಲಿಸಿ, ವಿತರಣೆ ಮಾಡಲುಎಸ್ಡಿಎಂಸಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ ಎಂದು ಸಮಗ್ರ ಶಿಕ್ಷಣ–ಕರ್ನಾಟಕದ ಪ್ರಕಟಣೆ ತಿಳಿಸಿದೆ.