ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವರ್ಷ ಪೂರೈಸಿದ ಗೃಹಲಕ್ಷ್ಮಿ ಯೋಜನೆ: ಖುಷಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ

Published : 1 ಸೆಪ್ಟೆಂಬರ್ 2024, 5:37 IST
Last Updated : 1 ಸೆಪ್ಟೆಂಬರ್ 2024, 5:37 IST
ಫಾಲೋ ಮಾಡಿ
Comments

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಐದು ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಜಾರಿಯಾಗಿ ವರ್ಷ ಪೂರೈಸಿದೆ. ಈ ಹಿನ್ನೆಲೆ ಸಂತಸ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಯೋಜನೆಯ ಫಲಾನುಭವಿಗಳ ಕಥೆಗಳನ್ನು ಹಂಚಿಕೊಂಡಿದ್ದಾರೆ. 

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ‘ನಾಡಿನ ನನ್ನ ಅಕ್ಕತಂಗಿಯರ, ತಾಯಂದಿರ ಕುಟುಂಬ ನಿರ್ವಹಣೆಯ ಹೊರೆಯನ್ನು ತಗ್ಗಿಸಿ, ಅವರಿಗೆ ನೆಮ್ಮದಿಯ ಬದುಕು ಕಟ್ಟಿಕೊಡಲು ರೂಪಿಸಿದ ಗೃಹಲಕ್ಷ್ಮಿ ಯೋಜನೆ ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಯೋಜನೆಯ ಪೂರ್ಣ ಸದುಪಯೋಗ ಪಡೆದು ನವ ಉತ್ಸಾಹದಿಂದ ಹೊಸ ಬದುಕಿನತ್ತ ಹೆಜ್ಜೆಹಾಕುತ್ತಿರುವ ಫಲಾನುಭವಿ ಮಹಿಳೆಯರ ಯಶೋಗಾಥೆಯಿವು. ಬೆರಳೆಣಿಕೆಯಷ್ಟು ಮಾತ್ರ ಬೆಳೆಕಿಗೆ ಬಂದಿವೆ, ಸುದ್ದಿಯಾಗದ ಲಕ್ಷಾಂತರ ಕತೆಗಳಿವೆ. ಈ ಎಲ್ಲವೂ ಯೋಜನೆಯ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ’ ಎಂದು ಬರೆದುಕೊಂಡಿದ್ದಾರೆ.

ವಿದ್ಯಾಭ್ಯಾಸಕ್ಕೆ ನೆರವಾದ ಗೃಹಲಕ್ಷ್ಮಿ ಹಣ, ಹಾವೇರಿಯ ಮಹಿಳೆಯೊಬ್ಬರು ಸೊಸೆಗೆ ಫ್ಯಾನ್ಸಿ ಸ್ಟೋರ್‌ ತೆರೆದ ಕಥೆ, ವೃದ್ದೆಯೊಬ್ಬರು ಗೃಹಲಕ್ಷ್ಮಿ ಹಣದಿಂದ ಹೋಳಿಗೆ ಊಟ ಹಾಕಿಸಿದ ಸಂದರ್ಭ... ಹೀಗೆ ಹಣ ಸದುಪಯೋಗವಾದ ಕುರಿತ ಉದಾಹರಣೆಗಳನ್ನು ಹಂಚಿಕೊಂಡಿದ್ದಾರೆ. 

2023ರ ಆ.30 ರಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿತ್ತು. ಪ್ರತಿ ತಿಂಗಳು ₹2 ಸಾವಿರ ಹಣವನ್ನು ಕುಟುಂಬದ ಯಜಮಾನಿಗೆ ನೀಡುವ ಯೋಜನೆ ಇದಾಗಿದೆ. ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಈ ಯೋಜನೆ ಜಾರಿಗೆ ತಂದಿರುವುದಾಗಿ ಸರ್ಕಾರ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT