ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gruha Jyothi Scheme- ಗೃಹ ಜ್ಯೋತಿಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Published 5 ಆಗಸ್ಟ್ 2023, 8:01 IST
Last Updated 5 ಆಗಸ್ಟ್ 2023, 8:01 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ನೂತನ ವಿದ್ಯಾಲಯ (ಎನ್‌ವಿ) ಮೈದಾನದಲ್ಲಿ ಶನಿವಾರ ಇಂಧನ ಇಲಾಖೆ ಹಾಗೂ ಜೆಸ್ಕಾಂ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ‘ಗೃಹ ಜ್ಯೋತಿ’ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಚುನಾವಣೆ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಪ್ರತಿ ಕುಟುಂಬಕ್ಕೆ 200 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ‘ಗೃಹ ಜ್ಯೋತಿ’ ಯೋಜನೆ ಉದ್ಘಾಟನೆಗಾಗಿ ವೇದಿಕೆಯ ಮೇಲೆ ನಿರ್ಮಿಸಲಾದ ಮಾದರಿ ಮನೆಯ ವಿದ್ಯುತ್‌ ದೀಪ ಬೆಳಗಿಸುವ ಮೂಲಕ ಚಾಲನೆ ಕೊಟ್ಟರು.

ರಾಜ್ಯಸಭೆಯ ವಿರೋಧಪಕ್ಷದ ನಾಯಕರೂ ಆಗಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಇಂಧನ ಸಚಿವ ಕೆ.ಜೆ. ಜಾರ್ಜ್,‌ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ ಸೇರಿ ಹಲವರು ಸಾಥ್ ನೀಡಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT