ಬೆಂಗಳೂರು: ‘ಇದೇ 19ರಂದು ನಡೆಯಲಿರುವ ಅಂಗನವಾಡಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಗುವುದು’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.

ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ನೋಂದಣಿ ಪ್ರಮಾಣಪತ್ರವನ್ನು ಹೆಬ್ಬಾಳಕರ ಅವರಿಗೆ ಸಹಕಾರ ಇಲಾಖೆಯ ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಲಕ್ಷ್ಮೀಪತಯ್ಯ ಮಂಗಳವಾರ ಹಸ್ತಾಂತರಿಸಿದರು.

‘ಫಲಾನುಭವಿಗಳಿಗೆ ಈ ಸಂಘದ ಮೂಲಕ ಕಡಿಮೆ ಬಡ್ಡಿ ದರದಲ್ಲಿ ₹ 3 ಲಕ್ಷದವರೆಗೆ ಸಾಲ ನೀಡಲಾಗುವುದು. ಇದರಿಂದ ಮಹಿಳೆಯರಿಗೆ ಮತ್ತಷ್ಟು ಆರ್ಥಿಕ ಶಕ್ತಿ ತುಂಬಿದಂತಾಗುತ್ತದೆ. ಮಹಿಳೆಯರ ಸುರಕ್ಷತೆ ಹಾಗೂ ಆರ್ಥಿಕವಾಗಿ ಸ್ವಾವಲಂಬನೆ ಮಾಡುವುದೇ ಸರ್ಕಾರದ ಮುಖ್ಯ ಗುರಿ’ ಎಂದರು.

‘ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಸುಮಾರು 1.24 ಕೋಟಿ ಫಲಾನುಭವಿಗಳು ಪಡೆಯುತ್ತಿದ್ದು, ಇದುವರೆಗೂ ₹ 52,416 ಕೋಟಿಗೂ ಹೆಚ್ಚು ಮೊತ್ತವನ್ನು ಅವರ ಖಾತೆಗೆ ಜಮೆ ಮಾಡಲಾಗಿದೆ. ಗೃಹಲಕ್ಷ್ಮೀ ಯೋಜನೆಯ ಹಣವನ್ನು ಮತ್ತೊಂದು ರೀತಿಯಲ್ಲಿ ತೊಡಗಿಸಿ ಆದಾಯ ಒದಗಿಸುವ ಉದ್ದೇಶದಿಂದ ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸಲಾಗುತ್ತಿದೆ’ ಎಂದರು.

‘ಖಾಸಗಿ ಫೈನಾನ್ಸ್ಗಳಿಂದ ದುಬಾರಿ ಬಡ್ಡಿಗೆ ಸಾಲ ಪಡೆದು ಮಹಿಳೆಯರು ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಇದೀಗ ಗೃಹಲಕ್ಷ್ಮೀ ಹಣದಿಂದಲೇ ಬ್ಯಾಂಕ್ ಆರಂಭಿಸಿ ಮಹಿಳೆಯರಿಗೆ ಸಂಕಷ್ಟದಲ್ಲಿ ಸಾಲ ಸೌಲಭ್ಯ ನೀಡಿ, ಅವರನ್ನು ಸ್ವಾವಲಂಬಿಗಳಾಗಿ ಮಾಡಲಾಗುವುದು’ ಎಂದೂ ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.