ಬೆಂಗಳೂರು: ರಾಜ್ಯಕ್ಕೆ ನೂತನ ಮುಖ್ಯಮಂತ್ರಿ ಆಯ್ಕೆ ಮಾಡುವುದಕ್ಕೂ ಮುನ್ನ ಗೃಹಲಕ್ಷ್ಮಿ ಯೋಜನೆಯ ₹5 ಸಾವಿರ ಕೋಟಿ ವಿವಾದದ ಬಗ್ಗೆ ಉತ್ತರ ಕೊಡಿ ಎಂದು ಬಿಜೆಪಿ ಶಾಸಕ ಎಸ್. ಸುರೇಶ್ ಕುಮಾರ್ ಅವರು ಸಿದ್ಧರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.

ಈ ಕುರಿತು ಸಿದ್ಧರಾಮಯ್ಯನವರಿಗೆ ಪತ್ರವನ್ನು ಬರೆದಿರುವ ಸುರೇಶ್ ಕುಮಾರ್, ‘2025ರ ಫೆಬ್ರುವರಿ ಮತ್ತು ಮಾರ್ಚ್ ತಿಂಗಳುಗಳ ಗೃಹಲಕ್ಷ್ಮಿ ಯೋಜನೆಯ ಹಣವು ರಾಜ್ಯದಲ್ಲಿರುವ ಫಲಾನುಭವಿ ಕುಟುಂಬಗಳಿಗೆ ತಲುಪಿಲ್ಲ. ಇದರ ಮೊತ್ತವು ₹5000 ಕೋಟಿಯಾಗಿದ್ದು, ಅಧಿಕಾರದಿಂದ ಕೆಳಗೆ ಇಳಿಯುವ ಮುನ್ನ ಸಿದ್ಧರಾಮಯ್ಯ ಅವರು ಇದಕ್ಕೆ ವಿವರಣೆ ನೀಡಬೇಕು’ ಎಂದು ಒತ್ತಾಯಿಸಿದ್ದಾರೆ.

‘ಸಿದ್ದರಾಮಯ್ಯನವರೇ, ನಿಮ್ಮ ಪಕ್ಷದ ಸೂಚನೆಯಂತೆ ನೀವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೀರಿ. ಇಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ಹೊಸ ನಾಯಕರನ್ನು ಆರಿಸಲಾಗುತ್ತದೆ ಎಂಬುದು ಮಾಧ್ಯಮಗಳ ಮೂಲಕ ತಿಳಿದುಬಂದಿದೆ. ನಿಮ್ಮ ಮುಂದಿನ ದಿನಗಳು ಶುಭಕರವಾಗಿರಲಿ ಎಂದು ನಾನು ಮನ:ಪೂರ್ವಕವಾಗಿ ಹಾರೈಸುತ್ತೇನೆ. ಈ ಸಮಯದಲ್ಲಿ ನಾನು ನಿಮ್ಮಲ್ಲಿ ಒಂದು ವಿನಮ್ರ ಮನವಿಯನ್ನು ಮಾಡಿಕೊಳ್ಳುತ್ತಿದ್ದೇನೆ. ನೀವು ನಮ್ಮ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಜೊತೆಗೆ ಅದೇ ಸಮಯದಲ್ಲಿ ನಮ್ಮ ರಾಜ್ಯದ ಹಣಕಾಸು ಸಚಿವರೂ ಆಗಿದ್ದಿರಿ. ಇಡೀ ದೇಶದಲ್ಲಿ ದಾಖಲೆ ಸಂಖ್ಯೆಯ ಬಜೆಟ್ ಗಳನ್ನು ಮಂಡಿಸಿದ ಹೆಗ್ಗಳಿಕೆ ನಿಮ್ಮದು. ಒಂದು ರೀತಿಯಲ್ಲಿ ನಮ್ಮ ರಾಜ್ಯದ ಆರ್ಥಿಕ ತಜ್ಞರು ನೀವು. ಆದರೆ, 2025 ಡಿಸೆಂಬರ್ 9 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ವಿಧಾನ ಮಂಡಲದ ಚಳಿಗಾಲದ ಅಧಿವೇಶನದಲ್ಲಿ, ವಿಧಾನಸಭೆಯಲ್ಲಿ ನಮ್ಮ ಪಕ್ಷದ ಶಾಸಕರಾದ ಮಹೇಶ ಟೆಂಗಿನಕಾಯಿ ಅವರು ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಅಧಿಕ ಮತಗಳನ್ನು ಪಡೆಯಲು ಕಾರಣವಾಗಿದ್ದ ಗೃಹಲಕ್ಷ್ಮಿ ಯೋಜನೆ ಕುರಿತು ಮಹತ್ವದ ವಿಷಯವನ್ನು ಪ್ರಸ್ತಾಪಿಸಿದ್ದರು. ಅದು ನೆನಪಿದೆಯೇ’ ಎಂದು ಪ್ರಶ್ನಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಲ್ಲಿ ಸಂಭವಿಸಿದ್ದ ಬಹಳ ಗಂಭೀರ ಪ್ರಮಾದವನ್ನು ಮಹೇಶ ಟೆಂಗಿನಕಾಯಿ ಪ್ರಸ್ತಾಪಿಸಿದ್ದರು. 2025ರ ಫೆಬ್ರುವರಿ ಮತ್ತು ಮಾರ್ಚ್ ತಿಂಗಳುಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಬಿದ್ದಿಲ್ಲ ಎಂದು ಆರೋಪ ಮಾಡಿದ್ದರು. ಇದರ ಮೊತ್ತ ₹5 ಸಾವಿರ ಕೋಟಿಯಾಗಿದ್ದು, ಇದು 1.14 ಕೋಟಿ ಗೃಹಲಕ್ಷ್ಮಿಯರಿಗೆ ಮಾಡಿದ ವಂಚನೆಯಾಗಿದೆ ಎಂದು ಆರೋಪಿಸಿದ್ದಾರೆ.

ಈ ಕುರಿತು ಮಹೇಶ ಟೆಂಗಿನಕಾಯಿ ಅವರು ಸದನದಲ್ಲಿ ಕೇಳಿದಾಗ, ನಿಮ್ಮ ಸಂಪುಟದ ಮಾನ್ಯ ಸಚಿವೆ ಹಣ ಪಾವತಿಯಾಗಿದೆ ಎಂದು ಮೊದಲು ಹೇಳಿದ್ದರು. ಆದರೆ, ಇವರು ಹಣ ಪಾವತಿ ಆಗಿಲ್ಲದಿರುವುದನ್ನು ದಾಖಲೆ ಸಮೇತ ಸಭೆಯ ಗಮನಕ್ಕೆ ತಂದು, ಸರ್ಕಾರವನ್ನು ಪ್ರಶ್ನಿಸಿದ್ದರು. ಅದಕ್ಕೆ ಸರಕಾರದ ನಿರುತ್ತರವೇ ಉತ್ತರವಾಗಿತ್ತು. ಈ ಬಾರಿ ಮೊತ್ತದ ಹಣ ಎಲ್ಲಿ, ಯಾರಿಗೆ ಹೋಗಿದೆ ಎಂಬುದು ಇದುವರೆಗೂ ರಾಜ್ಯದ ಜನತೆಗೆ ತಿಳಿದುಬಂದಿಲ್ಲ. ಹಾಗಾಗಿ, ಇದರ ಸ್ಥಿತಿಗತಿ ಏನು ಎಂಬುದನ್ನು ರಾಜ್ಯಕ್ಕೆ ತಿಳಿಸಬೇಕಿರುವುದು ರಾಜ್ಯದ ತಿಜೋರಿಯ ಸಂಪೂರ್ಣ ನಿಯಂತ್ರಣ ಹೊಂದಿದ್ದ ನಿಮ್ಮ ಜವಾಬ್ದಾರಿ ಎಂದು. ಈ ಕುರಿತು ಸ್ಪಷ್ಟೀಕರಣ ನೀಡಬೇಕೆಂದು ಆಗ್ರಹಿಸುತ್ತೇನೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.