ಬೆಳಗಾವಿ: ‘ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆಯವರು ಅನುಮೋದನೆ ಕೊಟ್ಟಿದ್ದಾರೆ. ಈ ಸೋಮವಾರದಿಂದ ಶನಿವಾರದೊಳಗೆ ಮಹಿಳೆಯರ ಖಾತೆಗೆ ಹಣ ಜಮೆಯಾಗಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.
.ಅವರು ತಪ್ಪು ಮಾಹಿತಿ ಕೊಟ್ಟಿಲ್ಲ.. ಲಕ್ಷ್ಮೀ ಹೆಬ್ಬಾಳಕರ ಬೆನ್ನಿಗೆ ನಿಂತ ಡಿಸಿಎಂ.
ನಾಯಕತ್ವ ಬದಲಾವಣೆ ಅಥವಾ ಸಚಿವ ಸಂಪುಟದ ವಿಸ್ತರಣೆ ಕುರಿತ ಪ್ರಶ್ನೆಗೆ, ‘ಇವೆರಡೂ ವಿಚಾರಗಳ ಬಗ್ಗೆ ನನಗೆ ಗೊತ್ತಿಲ್ಲ. ಪಕ್ಷದ ಹೈಕಮಾಂಡ್ ಇದನ್ನು ನಿರ್ಧರಿಸುತ್ತದೆ. ಅದು ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ’ ಎಂದರು.

‘ಸಿ.ಎಂ ಸಿದ್ದರಾಮಯ್ಯ ಅವರ ಮನಸ್ಸಿನಲ್ಲಿ ಬೆಳಗಾವಿ ಜಿಲ್ಲೆ ವಿಭಜನೆ ಮಾಡಬೇಕು ಎಂಬ ವಿಚಾರವಿದೆ. ಆಡಳಿತಾತ್ಮಕ ಅನುಕೂಲತೆ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಜಿಲ್ಲೆ ವಿಭಜನೆ ಆಗಬೇಕಿದೆ. ಹಾಗಾಗಿ ಸಿ.ಎಂ ಚರ್ಚೆಯನ್ನೂ ನಡೆಸಿದರು. ಎರಡು ಅಥವಾ ಮೂರು ಜಿಲ್ಲೆ ರಚನೆಗೆ ಯೋಜಿಸಿದ್ದರು. ಆದರೆ, ಬೇರೆ ಬೇರೆ ತಾಲ್ಲೂಕುಗಳನ್ನು ಜಿಲ್ಲೆಯಾಗಿ ಘೋಷಿಸಬೇಕು ಎಂದು ಹಲವರು ನಿಯೋಗ ತಂದರು. ಹಾಗಾಗಿ ಅಳೆದು ತೂಗಿ ನಿರ್ಧಾರ ಮಾಡಲು ಮುಂದಾಗಿದ್ದಾರೆ’ ಎಂದರು.
.ಗೃಹ ಲಕ್ಷ್ಮೀ ಯೋಜನೆ: ಕ್ಷಮೆಯಾಚಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.