ಮಂಡ್ಯ: ‘ಮನೆಯ ಯಜಮಾನಿಗೆ ₹ 2 ಸಾವಿರ ನೀಡುವ ಗೃಹಲಕ್ಷ್ಮಿ ಯೋಜನೆಗೆ ಆ.30ರಂದು ಮೈಸೂರಿನಲ್ಲಿ ನಮ್ಮ ನಾಯಕ ರಾಹುಲ್‌ಗಾಂಧಿ ಚಾಲನೆ ನೀಡಲಿದ್ದಾರೆ’ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿದರು.
‘ವಿವಿಧ ಕಾರಣಗಳಿಂದಾಗಿ ಯೋಜನೆ ಉದ್ಘಾಟನಾ ದಿನಾಂಕವನ್ನು ಮುಂದೂಡಲಾಗಿತ್ತು. ಈಗ ದಿನಾಂಕ ಅಂತಿಮಗೊಂಡಿದ್ದು ಮೈಸೂರಿನಲ್ಲಿ ದೊಡ್ಡ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಗುವುದು’ ಎಂದರು. ಮೊದಲು ಬೆಳಗಾವಿಯಲ್ಲಿ ಚಾಲನೆ ನೀಡಲು ನಿರ್ಧರಿಸಲಾಗಿತ್ತು. ಈಗ ಸ್ಥಳ ಬದಲಾಯಿಸಿದ ಆದೇಶ ಶುಕ್ರವಾರ ಹೊರಬಿದ್ದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.