ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಅನೂಕೂಲಕ್ಕೆಂದು ಸ್ಥಾಪಿಸಿರುವ, ‘ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘ’ದ ಪದಾಧಿಕಾರಿಗಳ ಆಯ್ಕೆಗೆ ಶನಿವಾರ ನಡೆಯಬೇಕಿದ್ದ ಚುನಾವಣೆಯನ್ನು ದಿಢೀರ್ ಎಂದು ಮುಂದೂಡಲಾಗಿದೆ.

ಸಂಘಕ್ಕೆ 38 ಪದಾಧಿಕಾರಿಗಳ ಆಯ್ಕೆಗೆ ಇದೇ 14ರಂದು ಚುನಾವಣಾ ಪ್ರಕ್ರಿಯೆ ಆರಂಭಿಸಲಾಗಿತ್ತು. ಈ ಪ್ರಕಾರ 28ರ ಶನಿವಾರ ಬೆಂಗಳೂರಿನ ಕಬ್ಬನ್ ಉದ್ಯಾನದ ಬಾಲಭವನ ಸಭಾಂಗಣದಲ್ಲಿ ಚುನಾವಣೆ ನಡೆಯಬೇಕಿತ್ತು. ಇದಕ್ಕಾಗಿ ಸಿದ್ಧತೆ ಮಾಡಿಕೊಂಡಿದ್ದ ಅಭ್ಯರ್ಥಿಗಳು ಹಾಗೂ ಸುಮಾರು 2,000 ಸದಸ್ಯರೊಂದಿಗೆ ಮೂರು ದಿನಗಳ ಹಿಂದೆಯೇ ನಗರಕ್ಕೆ ಬಂದಿದ್ದರು.

ಶನಿವಾರ ಬೆಳಿಗ್ಗೆ ಮತದಾನದ ಪ್ರಕ್ರಿಯೆ ಆಗಬೇಕಿತ್ತು. ಆದರೆ, ಸಂಜೆಯವರೆಗೂ ಚುನಾವಣಾ ಅಧಿಕಾರಿ ಮತ್ತು ಸಂಘದ ಮುಖ್ಯ ಪ್ರವರ್ತಕರು ಸ್ಥಳಕ್ಕೆ ಬಂದಿರಲಿಲ್ಲ. ಆದರೆ ಸಂಜೆಯ ಹೊತ್ತಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ನಿರ್ದೇಶಕರು, ‘ಚುನಾವಣೆಯನ್ನು ಮುಂದೂಡಲಾಗಿದೆ’ ಎಂದು ಆದೇಶಿಸಿದ್ದಾರೆ.

‘ಸಂಘದ ಚುನಾವಣೆ ನಡೆಸಲು ಅನುದಾನ ಮತ್ತು ಬಾಲ ಭವನದಲ್ಲಿ ಸ್ಥಳವೂ ಲಭ್ಯವಿಲ್ಲ. ಹೀಗಾಗಿ ಚುನಾವಣೆ ಮುಂದೂಡಲಾಗಿದೆ’ ಎಂದು ಆದೇಶದಲ್ಲಿ ವಿವರಿಸಿದ್ದಾರೆ.

‘ಸಹಕಾರ ಸಿಗುತ್ತಿಲ್ಲ’: ಸಂಘದ ಚುನಾವಣಾ ಪ್ರಕ್ರಿಯೆಗೆ ನಿಯೋಜಿಸಲಾಗಿದ್ದ ರಿಟರ್ನಿಂಗ್ ಅಧಿಕಾರಿಯು ಸಹಕಾರ ಚುನಾವಣಾ ಪ್ರಾಧಿಕಾರದ ಸಹಕಾರ ಸಂಘಗಳ ಜಂಟಿ ನಿಬಂಧಕರಿಗೆ ಬರೆದಿರುವ ಪತ್ರದ ಪ್ರತಿ ‘ಪ್ರಜಾವಾಣಿ’ಗೆ ಲಭ್ಯವಾಗಿದೆ. ‘ಚುನಾವಣಾ ಪ್ರಕ್ರಿಯೆ ನಡೆಸಲು ಗೃಹಲಕ್ಷ್ಮಿ ವಿವಿಧೋದ್ದೇಶ ಸಹಕಾರ ಸಂಘದ ಮುಖ್ಯ ಪ್ರವರ್ತಕರು ಸಹಕಾರ ನೀಡುತ್ತಿಲ್ಲ. ಜತೆಗೆ ಬಾಲ ಭವನದಲ್ಲಿ ಸ್ಥಳವೂ ಇಲ್ಲ. ಹೀಗಾಗಿ ಚುನಾವಣೆ ಮುಂದೂಡಿ’ ಎಂದು ಕೋರಿದ್ದಾರೆ.

ಈ ಪತ್ರಕ್ಕೆ ಸಹಕಾರ ಸಂಘಗಳ ಜಂಟಿ ನಿಬಂಧಕರು ಆಕ್ಷೇಪ ವ್ಯಕ್ತಪಡಿಸಿದ್ದು, ‘ಎಲ್ಲ ಸಿದ್ಧತೆಗಳು ಪೂರ್ಣಗೊಂಡಿರುವಾಗ ಮತ್ತು ಮತದಾನಕ್ಕೆ ಎರಡು ದಿನ ಇರುವಾಗ ಚುನಾವಣೆ ಮುಂದೂಡುವುದು ಸಾಧ್ಯವಿಲ್ಲ. ಹೀಗಾಗಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಚುನಾವಣಾಧಿಕಾರಿಗೆ ಪತ್ರ ಬರೆದಿದ್ದಾರೆ.

ಆದರೆ ಮತದಾನದ ದಿನವೇ ಚುನಾವಣಾ ಪ್ರಕ್ರಿಯೆಯನ್ನು ಮುಂದೂಡಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಆದೇಶಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ಪಡೆದುಕೊಳ್ಳಲು ಇಲಾಖೆಯ ನಿರ್ದೇಶಕರಿಗೆ ಮತ್ತು ಚುನಾವಣಾಧಿಕಾರಿಗೆ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.