ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಗಾಗಿ 2025–26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್ಸಿಎಸ್ಪಿ) ಹಾಗೂ ಗಿರಿಜನ ಉಪ ಯೋಜನೆ (ಟಿಎಸ್ಪಿ) ಅನುದಾನದಲ್ಲಿ ಒಟ್ಟು ₹13,433 ಕೋಟಿ ಬಳಕೆ ಮಾಡಿರುವ ಬಗ್ಗೆ ವಿಧಾನಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ‘ಪರಿಶಿಷ್ಟರಿಗೆ ಮೀಸಲಾದ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಸುತ್ತಿರುವುದು, ದಲಿತರಿಗೆ ಮಾಡುತ್ತಿರುವ ದ್ರೋಹ’ ಎಂದು ಕಿಡಿಕಾರಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಎಂ.ಚಂದ್ರಪ್ಪ ಅವರ ಪ್ರಶ್ನೆಗೆ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೀಡಿದ ಉತ್ತರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ದಲಿತ ಸಮುದಾಯದ ನಿರಂತರ ಧ್ವನಿಯಾಗಿ ಬಂದಿದ್ದ, ಮಹದೇವಪ್ಪ ಅವರೇ ಅನ್ಯಾಯ ಮಾಡಿದ್ದಾರೆ ಎಂದು ಹರಿಹಾಯ್ದರು.

ಚಂದ್ರಪ್ಪ ಮಾತನಾಡಿ, ₹42,017.5 ಕೋಟಿ ಎಸ್ಸಿಎಸ್ಪಿ ಹಾಗೂ ಟಿಎಸ್ಪಿ ಅನುದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಗೆ ಕೇವಲ ₹5,104 ಕೋಟಿಯನ್ನು ನೀಡಿದ್ದು, ಉಳಿದ ಮೊತ್ತವನ್ನು 33 ಇಲಾಖೆಗಳಿಗೆ ಹಂಚಲಾಗಿದೆ. ಅಷ್ಟೂ ಮೊತ್ತವನ್ನು ಸಮಾಜ ಕಲ್ಯಾಣ ಇಲಾಖೆಗೆ ನೀಡಬೇಕಿತ್ತು ಎಂದು ಹೇಳಿದರು.

‘ಬಿಜೆಪಿ ಸರ್ಕಾರ ಶೇ 40 ರಷ್ಟು ಕಮಿಷನ್ ಪಡೆಯುತ್ತಿದೆ ಎಂದು ದೂರಿದ್ದ ನೀವು ಅದನ್ನು ನಿಲ್ಲಿಸಿ, ಅದರಿಂದ ಸಿಗುವ ಮೊತ್ತವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸುವುದಾಗಿ ಹೇಳಿದ್ದೀರಿ. ಈಗ ಗ್ಯಾರಂಟಿಗಳಿಗೆ ₹13,433 ಕೋಟಿ ಬಳಕೆ ಮಾಡಿದ್ದೀರಿ? ಯಾವ ಪುರುಷಾರ್ಥಕ್ಕೆ ಇಷ್ಟು ಹಣ ಕೊಟ್ಟಿದ್ದೀರಿ’ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.