ಬೆಂಗಳೂರು: ‘ಕಾಂಗ್ರೆಸ್ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಟೀಕಿಸಲು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ’ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೇವಾಲ ದೂರಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಸಾಮಾಜಿಕ ನ್ಯಾಯ ಎತ್ತಿ ಹಿಡಿದು, ಕೋಟ್ಯಂತರ ಜನರ ಜೀವನದಲ್ಲಿ ಬದಲಾವಣೆ ತಂದಿವೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ ಎಂಬ ದೇವೇಗೌಡರ ಹೇಳಿಕೆ ಬಿಜೆಪಿ-ಜೆಡಿಎಸ್ ದ್ವೇಷ ರಾಜಕಾರಣಕ್ಕೆ ಒಂದು ಉದಾಹರಣೆ. ಎರಡೂ ‘ಕುರುಡು ದೃಷ್ಟಿಯುಳ್ಳ ಪಕ್ಷಗಳು’ ಎಂದು ಟೀಕಿಸಿದರು.

‘ಗ್ಯಾರಂಟಿ ಯೋಜನೆಗಳಿಗಾಗಿಯೇ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ₹97 ಸಾವಿರ ಕೋಟಿ ಹಣವನ್ನು ವ್ಯಯಿಸುತ್ತಿರುವಾಗ ಆರ್ಥಿಕ ಪರಿಸ್ಥಿತಿ ಹೇಗೆ ಹದಗೆಡಲು ಸಾಧ್ಯ? ಸಾಮಾಜಿಕ ನ್ಯಾಯದ ಉದ್ದೇಶವನ್ನು ಹತ್ತಿಕ್ಕುವ ಮೂಲಕ ಗ್ಯಾರಂಟಿಗಳನ್ನು ಸ್ಥಗಿತಗೊಳಿಸಲು ಬಿಜೆಪಿ-ಜೆಡಿಎಸ್ ಬಯಸುತ್ತಿವೆ. ಇಂತಹ ದುಷ್ಟ ಪ್ರಯತ್ನವನ್ನು ಸಫಲವಾಗಲು ಕಾಂಗ್ರೆಸ್ ಬಿಡುವುದಿಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.