ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ: ಸಿಎಂ ಸಿದ್ದರಾಮಯ್ಯ

‘ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರೆಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
Published 31 ಜನವರಿ 2024, 11:22 IST
Last Updated 31 ಜನವರಿ 2024, 11:22 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯ ಸರ್ಕಾರದ ‘ಗ್ಯಾರಂಟಿ’ ಯೋಜನೆಗಳು ಬಡವರ ಕಾರ್ಯಕ್ರಮಗಳಾಗಿದ್ದು, ಅವುಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

‘ಲೋಕಸಭೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸದಿದ್ದರೆ, ‘ಗ್ಯಾರಂಟಿ’ ಯೋಜನೆಗಳನ್ನು ರದ್ದುಗೊಳಿಸಲಾಗುವುದು’ ಎಂದು ಮಾಗಡಿ ಕಾಂಗ್ರೆಸ್‌ ಶಾಸಕ ಎಚ್‌.ಸಿ. ಬಾಲಕೃಷ್ಣ ಅವರು ಮಂಗಳವಾರ ನೀಡಿದ್ದ ಹೇಳಿಕೆಗೆ ಬುಧವಾರ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ‘ಗ್ಯಾರಂಟಿ ಯೋಜನೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರೆಸಲಾಗುವುದು’ ಎಂದರು.

ಕನ್ನಡ ಬಳಕೆ ಕಡ್ಡಾಯ– ಮಸೂದೆ ಮಂಡನೆ

‘ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಬಳಕೆ ಕಡ್ಡಾಯ ಮಾಡಲು ಹೊರಡಿಸಿದ್ದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ಹಿಂದಿರುಗಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕನ್ನಡ ಬಳಕೆ ಕಡ್ಡಾಯದ ಬಗ್ಗೆ ಸುಗ್ರೀವಾಜ್ಞೆಗೆ ಅಂಕಿತ ಹಾಕಲು ರಾಜ್ಯಪಾಲರಿಗೆ ಕಳಿಸಲಾಗಿತ್ತು. ಆದರೆ,  ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕುವ ಮೊದಲೇ ಅಧಿವೇಶನ ಆರಂಭವಾದ ಕಾರಣ ವಾಪಸು ಕಳುಹಿಸಿದ್ದಾರೆ. ವಿಧಾನ ಮಂಡಲ ಅಧಿವೇಶನದಲ್ಲಿ ಮಸೂದೆ ಮಂಡಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT