ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕ ವಿಳಂಬವಾಗಿರುವ ಕಾರಣದಿಂದಾಗಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಕೋರ್ಸ್ಗಳ ಸೆಮಿಸ್ಟರ್ ಅವಧಿಯನ್ನು ಒಂದು ತಿಂಗಳು ವಿಸ್ತರಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಎಲ್ಲ ವಿಶ್ವವಿದ್ಯಾಲಯಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪದವಿ ಕಾಲೇಜುಗಳ (ತಾಂತ್ರಿಕ ಶಿಕ್ಷಣ ಹೊರತುಪಡಿಸಿ) ಒಂದು, ಮೂರು ಮತ್ತು ಐದನೇ ಸೆಮಿಸ್ಟರ್ಗಳಿಗೆ ಈ ಆದೇಶ ಅನ್ವಯವಾಗಲಿದ್ದು, ವಿವಿಧ ವಿಶ್ವವಿದ್ಯಾಲಯಗಳು ಮೊದಲು ಪ್ರಕಟಿಸಿದ್ದ ಶೈಕ್ಷಣಿಕ ವೇಳಾಪಟ್ಟಿಯ ಅಂತಿಮ ದಿನಕ್ಕೆ ಅನ್ವಯಿಸಿ, ವಿಸ್ತರಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.

ಉದಾಹರಣೆಗೆ ಮೈಸೂರು ವಿಶ್ವವಿದ್ಯಾಲಯದ ಸೆಮಿಸ್ಟರ್ ಅವಧಿ ಜೂನ್ 30ರಿಂದ ಅ.23ರವರೆಗೆ, ಬೆಂಗಳೂರು ವಿಶ್ವವಿದ್ಯಾಲಯದ ಅವಧಿ ಜುಲೈ 11ರಿಂದ ಅ.28ರವರೆಗೆ ನಿಗದಿಯಾಗಿತ್ತು. ಅದನ್ನು ಕ್ರಮವಾಗಿ ನ.22 ಹಾಗೂ ನ.29 ವಿಸ್ತರಿಸಲಾಗಿದೆ. ಕೆಲವು ವಿಶ್ವವಿದ್ಯಾಲಯಗಳಲ್ಲಿ ಅವುಗಳ ಆರಂಭದ ದಿನಾಂಕದ ಆಧಾರದ ಮೇಲೆ 2026ನೇ ಜನವರಿ 10ರವರೆಗೂ ವಿಸ್ತರಿಸಲಾಗಿದೆ. ಈ ವಿಸ್ತರಣೆ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಬದಲಾವಣೆಗೂ ಅನ್ವಯವಾಗಲಿದೆ. ಬೋಧನೆ ಹೆಚ್ಚಿನ ಸಮಯ ಸಿಗಲಿದ್ದು, ಒತ್ತಡ ನಿವಾರಣೆಗೂ ಸಹಕಾರಿಯಾಗಲಿದೆ.

ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆ ವಿಳಂಬವಾದ ಕಾರಣ ವಿದ್ಯಾರ್ಥಿಗಳ ಕಲಿಕೆಗೆ ತೊಡಕಾಗಿದೆ. ಹಾಗಾಗಿ, ಶೈಕ್ಷಣಿಕ ಅವಧಿ ವಿಸ್ತರಿಸಬೇಕು ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು, ಪೋಷಕರು ಆಗ್ರಹಿಸಿದ್ದರು. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಉನ್ನತ ಶಿಕ್ಷಣ ಇಲಾಖೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.