ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕೈದಿಗಳಿಗೆ ಮನೆಯೂಟ: ಮಾರ್ಗಸೂಚಿಗೆ ಹೈಕೋರ್ಟ್‌ ಒಲವು

Published : 9 ಸೆಪ್ಟೆಂಬರ್ 2024, 21:10 IST
Last Updated : 9 ಸೆಪ್ಟೆಂಬರ್ 2024, 21:10 IST
ಫಾಲೋ ಮಾಡಿ
Comments

ಬೆಂಗಳೂರು: ‘ಕೈದಿಗಳಿಗೆ ಮನೆ ಊಟ ಹಾಗೂ ಇತರ ಅಗತ್ಯ ವಸ್ತುಗಳನ್ನು ತರಿಸಿಕೊಳ್ಳುವ ಸಂಬಂಧ ಮಾರ್ಗಸೂಚಿಗಳನ್ನು ರೂಪಿಸಲಾಗುವುದು’ ಎಂದು ಹೈಕೋರ್ಟ್ ತಿಳಿಸಿದೆ.

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ತಮಗೆ ಮನೆ ಊಟಕ್ಕೆ ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ದರ್ಶನ್ ಪರ ಹಿರಿಯ ವಕೀಲ ಪ್ರಭುಲಿಂಗ ಕೆ.ನಾವದಗಿ ಹಾಜರಾಗಿ, ‘ಅರ್ಜಿದಾರರನ್ನು ಬಳ್ಳಾರಿಗೆ ಜೈಲಿಗೆ ಸ್ಥಳಾಂತರ ಮಾಡಿರುವ ಕಾರಣ ಈಗ ಆ ಮನವಿ ಅಪ್ರಸ್ತುತವಾಗಲಿದೆ. ಆದರೆ, ನ್ಯಾಯಾಲಯವೇ ಇಂತಹುದಕ್ಕೆಲ್ಲಾ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸಬೇಕಾದ ಅವಶ್ಯ ಇದೆ. ಈ ನಿಟ್ಟಿನಲ್ಲಿ ನ್ಯಾಯಾಲಯಕ್ಕೆ ನೆರವು ನೀಡಲು ನಾನು ಸಿದ್ಧ’ ಎಂದರು.

ಮಾರ್ಗಸೂಚಿ ರೂಪಿಸಬೇಕೆಂಬ ಮನವಿಗೆ ಸ್ಪಂದಿಸಿದ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಇದೇ 11ಕ್ಕೆ ಮುಂದೂಡಿದರಲ್ಲದೆ, ‘ಮುಂದಿನ ವಿಚಾರಣೆಯಲ್ಲಿ ಈ ಮನವಿಯನ್ನು ಪರಿಗಣಿಸಲಾಗುವುದು’ ಎಂದು ಹೇಳಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT