ಬೆಂಗಳೂರು:ಗುಜರಾತ್ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಬಿಜೆಪಿ ಗೆ ಬಹುಮತ ಬರಲಿದ್ದು ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ. ನೂರಕ್ಕೆ ನೂರು 2023 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಡಾ:ಬಿ.ಆರ್.ಅಂಬೇಡ್ಕರ್ ಅವರ 66 ನೇ ಪುಣ್ಯಸ್ಮರಣೆ ಅಂಗವಾಗಿ ವಿಧಾನ ಸೌಧದ ಪೂರ್ವದಿಕ್ಕಿನಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದರು.

ಜನ ಇಂದು ಉತ್ತಮ ಆಡಳಿತ, ಅಭಿವೃದ್ಧಿ ಕಾರ್ಯಗಳನ್ನು ಬೆಂಬಲಿಸುತ್ತಾರೆ. ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳಿಗೆ ಬೆಂಬಲವಿಲ್ಲ ಎಂದು ಸ್ಪಷ್ಟವಾಗಿದೆ. ಗುಜರಾತ್ ಹಾಗೂ ಹಿಮಾಚಲ ಪ್ರದೇಶದಲ್ಲಿ ಬಿಜೆಪಿಗೆ ಜಯಭೇರಿ ಹೊಡೆಯಲಿದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಇಡೀ ಭಾರತ ಬೆಂಬಲ ನೀಡುತ್ತಿದೆ. ಇದೊಂದು ಸಕಾರಾತ್ಮಕ, ಅಧಿಕಾರದ ಪರ ಮತದಾರರ ತೀರ್ಪು. ಗುಜರಾತ್ ನಲ್ಲಿ 7 ನೇ ಬಾರಿಗೆ ಆಯ್ಕೆಯಾಗುತ್ತಿದ್ದು, ಇದು ನರೇಂದ್ರ ಮೋದಿಯವರ ನಾಯಕತ್ವ, ಆಡಳಿತದಲ್ಲಿ ಜನರ ಪ್ರಬಲವಾದ ನಂಬಿಕೆಯನ್ನು ತೋರಿದೆ ಎಂದರು.

ಚುನಾವಣಾ ದೃಷ್ಟಿಕೋನವಿಲ್ಲ
ಮಹಾರಾಷ್ಟ್ರ ಸಚಿವರು ಬಾರದೆ ಇರುವುದಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಇದು ಮಹಾರಾಷ್ಟ್ರ ದವರು ಬಹಳ ವರ್ಷಗಳಿಂದ ವಿವಾದ ಮಾಡಿಕೊಂಡು ಬಂದಿದ್ದಾರೆ. ವಿವಾದದಿಂದ ಎರಡೂ ಕಡೆ ಪ್ರತಿಕ್ರಿಯೆ ಬರುತ್ತದೆ. ಜನರ ಮಧೆ ಇರುವ ಸಾಮರಸ್ಯ ಕದಡುವ ಕೆಲಸ ಬೇಡ ಎಂದು ಹೇಳಿದ್ದೇನೆ. ಸುಪ್ರೀಂಕೋರ್ಟ್ ನಲ್ಲಿ ಪ್ರಕರಣ ವಿದ್ದು, ನಮ್ಮ ನಡೆ ಸಂವಿಧಾನಬದ್ಧವಾಗಿರುವುದರಿಂದ ಕಾನೂನು ಸಮರವನ್ನು ಗೆಲ್ಲುವ ವಿಶ್ವಾಸವಿದೆ. ನಮಗೆ ಚುನಾವಣಾ ದೃಷ್ಟಿಕೋನವಿಲ್ಲ.ಅಥವಾ ವಿವಾದ ಹುಟ್ಟಿಸುವ ಇರಾದೆಯೂ ಇಲ್ಲ. ನಮ್ಮ ಗಡಿ ಹಾಗೂ ಜನರ ರಕ್ಷಣೆ ಮಾಡುವ ಕೆಲಸಕ್ಕೆ ನಾವು ಬದ್ಧರಾಗಿದ್ದೇವೆ. ಮಹಾರಾಷ್ಟ್ರ, ತೆಲಂಗಾಣ, ಕೇರಳದಲ್ಲಿರುವ ಕನ್ನಡಿಗರ ಹಿತಚಿಂತನೆಯನ್ನೂ ಮಾಡುತ್ತಿದ್ದೇವೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.