ಗುಳೇದಗುಡ್ಡ: ‘ಸಹಕಾರ ಚಳವಳಿ ದೇಶದಲ್ಲಿ ದೊಡ್ಡ ಸಾಧನೆ ಮಾಡಿದೆ. ಬಡವರ ಆರ್ಥಿಕ ಸಧೃಡತೆಗೆ ಸಹಕಾರ ಕ್ಷೇತ್ರ ಸಹಕಾರಿಯಾಗಿದೆ. ಸಾಲ ಕೊಡುವುದು ಸುಲಭ, ಆದರೆ ಸಾಲ ವಸೂಲಿ ಮಾಡುವುದು ಬಹಳ ಕಷ್ಟದ ಕೆಲಸ. ಸಂಜಯ ಬರಗುಂಡಿಯವರು ಸಹಕಾರ ಬ್ಯಾಂಕ್ ಅನ್ನು 25 ವರ್ಷಗಳ ಕಾಲ ಮುನ್ನಡೆಸಿಕೊಂಡು ಬಂದು ಇಂದು ಸ್ವಂತ ಕಟ್ಟಡ ನಿರ್ಮಿಸಿದ್ದಾರೆ. ಇನ್ನಷ್ಟು ಎತ್ತರಕ್ಕೆ ಬೆಳೆಯಲಿ’ ಎಂದು ಜವಳಿ ಮತ್ತು ಸಕ್ಕರೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ಪಟ್ಟಣದಲ್ಲಿ ಶನಿವಾರ ಬಸವೇಶ್ವರ ಪತ್ತಿನ ಸಹಕಾರ ಸಂಘದ 25ನೇ ವರ್ಷದ ರಜತ ಮಹೋತ್ಸವದ ಸಂದರ್ಭದಲ್ಲಿ ಬ್ಯಾಂಕಿನ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

‘ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರ ಕ್ಷೇತ್ರದ ಕೊಡುಗೆ ಅಪಾರ. ಈ ದೇಶದಲ್ಲಿ ಸಹಕಾರ ಚಳವಳಿ ನಡೆಯದಿದ್ದರೆ ಬಡವರು ಆರ್ಥಿಕವಾಗಿ ಸ್ವಾವಲಂಬಿಗಳಾಗಿ ಬೆಳೆಯುವುದು ಕಷ್ಟವಾಗುತ್ತಿತ್ತು. ನೆಹರೂ, ವಲ್ಲಭಭಾಯಿ ಪಟೇಲ ಸೇರಿದಂತೆ ಅನೇಕ ಮಹನೀಯರು ಸಹಕಾರ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ’ ಎಂದರು.

ಇಳಕಲ್ ಚಿತ್ತರಗಿ ಸಂಸ್ಥಾನದ ಗುರುಮಹಾಂತ ಶ್ರೀ, ಕಮತಗಿ ಹೊಳೆಹುಚ್ಚೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಶಾಸಕ ಭೀಮಸೇನ ಚಿಮ್ಮನಕಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಹನಮಂತ ಮಾವಿನಮರದ, ಶಿವಾನಂದ ಉದುಪುಡಿ, ಮುರಗೇಶ ಕಡ್ಲಿಮಟ್ಟಿ, ಮಹಾಂತೇಶ ಮಮದಾಪುರ, ಬಸವೇಶ್ವರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸಂಜಯ ಬರಗುಂಡಿ, ಸಂಘದ ಎಲ್ಲ ನಿರ್ದೇಶಕರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-19-262500430

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.