ರಾಜ್ಯದಲ್ಲಿ ಮತಾಂತರ ತಡೆಗೆ ಕಾಯ್ದೆ ತರುವ ಬಗ್ಗೆ ವಿಧಾನಸಭೆಯಲ್ಲಿ ಮಂಗಳವಾರ ಶೂನ್ಯವೇಳೆಯಲ್ಲಿ ಮಾತನಾಡಿದ ಬಿಜೆಪಿಯ ಗೂಳಿಹಟ್ಟಿ ಶೇಖರ್, ಆಮಿಷ ಒಡ್ಡಿ ಮತಾಂತರ ಮಾಡಿದ ಬಗ್ಗೆ ಪ್ರಶ್ನಿಸಿದರೆ ಅತ್ಯಾಚಾರ ಹಾಗೂ ದೌರ್ಜನ್ಯ ಪ್ರಕರಣಗಳನ್ನು ದಾಖಲಿಸುವುದಾಗಿ ಚರ್ಚ್‌ನವರು ಬೆದರಿಕೆ ಒಡ್ಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹೇರಬೇಕು ಎಂದು ಆಗ್ರಹಿಸಿದರು.